ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಅಭಿಜಿತ್ ದೀಪ್ಕೆ, ಸೌರವ್ ದಾಸ್ ಮತ್ತು ಅಶುತೋಶ್ ರಾಂಕಾ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರ ಕ್ರಮವನ್ನು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ ಖಂಡಿಸಿದ್ದಾರೆ.
'ವಿಮಾನದಿಂದ ಇಳಿಯುತ್ತಿದ್ದಂತೆಯೇ 'ಜಿರಳೆ'ಗಳನ್ನು ಬಂಧಿಸುವುದನ್ನು ನೋಡಿದರೆ, ಬಿಜೆಪಿ ನಾಯಕರಲ್ಲಿ ಭಯ ಎಷ್ಟಿದೆ ಎಂಬುದು ಗೊತ್ತಾಗುತ್ತದೆ.
ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ತಲೆದಂಡ ಆಗಲೇಬೇಕು. ಪ್ರಧಾನಿ ಮೋದಿ ತೊಲಗಲೇಬೇಕು' ಎಂದು ವಾಗ್ದಾಳಿ ನಡೆಸಿದ್ದಾರೆ.
'ದೇಶದಲ್ಲಿರುವ ಸದ್ಯದ ಸ್ಥಿತಿ ತುರ್ತು ಪರಿಸ್ಥಿತಿಗಿಂತಲೂ ಕೆಟ್ಟದಾಗಿದೆ. ನಾವು ಮೋದಿ ಆಳ್ವಿಕೆಯ ಸರ್ವಾಧಿಕಾರದ ಅಡಿಯಲ್ಲಿ ಬದುಕುತ್ತಿದ್ದೇವೆ' ಎಂದು ಕೇಜ್ರಿವಾಲ್ ಗುಡುಗಿದ್ದಾರೆ.
'ಚುನಾವಣೆಯಲ್ಲಿ ಮತಗಳ ಕಳ್ಳತನದ ಮೂಲಕವೇ ತಾವು ಗೆದ್ದಿದ್ದೇವೆ ಎಂಬುದು ಮೋದಿ ಅವರಿಗೆ ಸ್ಪಷ್ಟವಾಗಿ ತಿಳಿದಿದೆ. ಈಗ ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ಹತ್ತಿಕ್ಕುವ ಮೂಲಕ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಪಣತೊಟ್ಟಿದ್ದಾರೆ' ಎಂದೂ ಅವರು ಕಿಡಿಕಾಡಿದ್ದಾರೆ.
ದೇಶದಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹಾಗೂ ಮತದಾರರ ನೋಂದಣಿಗೆ ಬಳಸುವ 'ಫಾರ್ಮ್-6' ವಿಚಾರವಾಗಿ ಪ್ರತಿಭಟನೆಗೆ ಕರೆ ನೀಡಿರುವ ಸಿಜೆಪಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಪಟ್ಟು ಹಿಡಿದಿದೆ.
ಮೋದಿ, ಶಾ ದೇಶದ ಜನರ ವಿರುದ್ಧ ಯುದ್ಧ ಸಾರಲು ಬಯಸುತ್ತಿದ್ದಾರೆ: ಅಭಿಜಿತ್ ದೀಪ್ಕೆ
