Dailyhunt Logo
  • Light mode
    Follow system
    Dark mode
    • Play Story
    • App Story
ಉಡುಪಿ: ಬೈಲೂರಿನ ವಾಸುದೇವ ಕೃಪಾ ಶಾಲೆಯಲ್ಲಿ ಸಂಸ್ಥಾಪಕರ ದಿನ ಆಚರಣೆ

ಉಡುಪಿ: ಬೈಲೂರಿನ ವಾಸುದೇವ ಕೃಪಾ ಶಾಲೆಯಲ್ಲಿ ಸಂಸ್ಥಾಪಕರ ದಿನ ಆಚರಣೆ

ಡುಪಿ: ಬೈಲೂರಿನ ವಾಸುದೇವ ಕೃಪಾ ಇಂಗ್ಲಿಷ್ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಂಸ್ಥಾಪಕರ ದಿನ ಆಚರಿಸಲಾಯಿತು.

ಶಾಲಾ ಸಂಸ್ಥಾಪಕ ಡಾ.ಟಿ.ಎಂ.ಎ. ಪೈ ಹಾಗೂ ಸ್ಥಳ ದಾನಿ ವಾಸುದೇವ ರಾವ್ ಬೈಲೂರು ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸಲಾಯಿತು. ಶಾಲಾ ಸಂಚಾಲಕ ಕೆ.

ಅಣ್ಣಪ್ಪ ಶೆಣೈ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂ.ಜಿ.ಎಂ ಕಾಲೇಜು ಸಹ ಪ್ರಾಂಶುಪಾಲ ವಿಶ್ವನಾಥ ಪೈ ಎಂ., ನಿವೃತ್ತ ಮುಖ್ಯ ಶಿಕ್ಷಕಿ ಯು. ಕಲ್ಯಾಣಿ ಪೈ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ದಯಾನಂದ ಕೋಟ್ಯಾನ್, ಮುಖ್ಯ ಶಿಕ್ಷಕಿ ನಿಶಾ ಉಪಸ್ಥಿತರಿದ್ದರು.

ಆರಾಧ್ಯ ಸ್ವಾಗತಿಸಿದರು. ವೈಭವಿ ವಂದಿಸಿದರು. ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು. ವಿದ್ಯಾರ್ಥಿ ದರ್ಶ್ ದೀಪಕ್ ಕುಮಾರ್ ನಿರೂಪಿಸಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಂಡಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260704-28-1524159584

Dailyhunt
Disclaimer: This content has not been generated, created or edited by Dailyhunt. Publisher: Prajavani