Dailyhunt Logo
  • Light mode
    Follow system
    Dark mode
    • Play Story
    • App Story
ಉಡುಪಿ | ಜಾನುವಾರು ತಲೆ ಬುರುಡೆ ಪತ್ತೆ

ಉಡುಪಿ | ಜಾನುವಾರು ತಲೆ ಬುರುಡೆ ಪತ್ತೆ

ಡುಪಿ: ಕಾಪು ತಾಲ್ಲೂಕಿನ ಶಿರ್ವ ಗ್ರಾಮದ ಕಲೊಟ್ಟು ಸೇತುವೆಯ ಕೆಳಗಡೆ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ತಲೆ ಬುರುಡೆಯ ಭಾಗ, ಕಾಲಿನ ಗೊರಸು ಪತ್ತೆಯಾಗಿರುವುದಕ್ಕೆ ಸಂಬಂಧಿಸಿ ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಪು ಪಶು ಆಸ್ಪತ್ರೆ ಉಪ ನಿರ್ದೇಶಕರು ಹಾಗೂ ಜಿಲ್ಲಾ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ದುಷ್ಕರ್ಮಿಗಳು ಹಸುವನ್ನು ಕಡಿದು ಮಾಂಸ ಮಾಡಿ ಅವಶೇಷಗಳನ್ನು ಹೊಳೆಗೆ ಎಸೆದಿರುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-28-660959755

Dailyhunt
Disclaimer: This content has not been generated, created or edited by Dailyhunt. Publisher: Prajavani