Dailyhunt
ಉಗ್ರರ ದಾಳಿ: ಹುತಾತ್ಮರಾದ ಭದ್ರತಾ ಸಿಬ್ಬಂದಿ

ಉಗ್ರರ ದಾಳಿ: ಹುತಾತ್ಮರಾದ ಭದ್ರತಾ ಸಿಬ್ಬಂದಿ

ಶ್ರೀನಗರ: ನಗರದ ಹೊರವಲಯದಲ್ಲಿರುವ ಪರಿಂಪೋರಾದಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ತ್ವರಿತ ಕಾರ್ಯಪಡೆ ತಂಡದ (ಕ್ಯುಆರ್‌ಟಿ) ಇಬ್ಬರು ಭದ್ರತಾ ಸಿಬ್ಬಂದಿ ಗುರುವಾರ ಮೃತಪಟ್ಟಿದ್ದಾರೆ.

ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರಿದಿದ್ದು, ದಾಳಿಕೋರರ ಪತ್ತೆಗೆ ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani