ನವದೆಹಲಿ: ದೇಶದಲ್ಲಿ 700 ಜಿಲ್ಲೆಗಳಿದ್ದು, ಪ್ರತಿ ಜಿಲ್ಲೆಯಲ್ಲಿ ಬಾಲಕಿಯರ ಹಾಸ್ಟೆಲ್ ನಿರ್ಮಾಣ ಮಾಡುವುದಾಗಿ 2026-27ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.
ಸತತ 9ನೇ ಬಾರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಿದ್ದಾರೆ.
Union Budget 2026: ಆರ್ಥಿಕ ಬೆಳವಣಿಗೆ, ಕುಟುಂಬ ಆದಾಯದ ಹೆಚ್ಚಳವೇ ನಿರ್ಮಲಾ ಆಯವ್ಯಯದ ಸೂತ್ರ
ಪಶುವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ರೋಗನಿರ್ಣಯ ಪ್ರಯೋಗಾಲಯಗಳಿಗೆ ಸಾಲ-ಸಂಬಂಧಿತ ಬಂಡವಾಳ ಸಬ್ಸಿಡಿ ಬೆಂಬಲ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದಿದ್ದಾರೆ.
ಗುಜರಾತ್‌ನ ಜಾಮ್‌ನಗರದಲ್ಲಿರುವ ಆಯುಷ್ ಔಷಧಾಲಯಗಳು ಮತ್ತು ಔಷಧ ಪರೀಕ್ಷಾ ಪ್ರಯೋಗಾಲಯಗಳನ್ನು ಮೇಲ್ದದರ್ಜೆಗೆ ಏರಿಸುವುದು ಮತ್ತು ಜಾಮ್‌ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಕೇಂದ್ರ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

