Dailyhunt
ಉಪ ಚುನಾವಣೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡುವುದಿಲ್ಲ: ಸಚಿವ ಕೆ.ಎಸ್. ಈಶ್ವರಪ್ಪ

ಉಪ ಚುನಾವಣೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ಕೊಡುವುದಿಲ್ಲ: ಸಚಿವ ಕೆ.ಎಸ್. ಈಶ್ವರಪ್ಪ

ಬೆಳಗಾವಿ: 'ಮುಂಬರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾವು ಮುಸ್ಲಿಂ ಸಮುದಾಯದವರಿಗೆ ಟಿಕೆಟ್ ನೀಡುವುದಿಲ್ಲ' ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಬೆಳಗಾವಿ ಹಿಂದುತ್ವದ ಕೇಂದ್ರ. ಇಲ್ಲಿ ನಾವು ಶಂಕರಾಚಾರ್ಯರ, ರಾಣಿ ಚನ್ನಮ್ಮ ಇಲ್ಲವೇ ಸಂಗೊಳ್ಳಿರಾಯಣ್ಣನ ಶಿಷ್ಯರಿಗೆ ಟಿಕೆಟ್ ನೀಡುತ್ತೇವೆ. ಆದರೆ ಮುಸ್ಲಿಮರಿಗೆ ಕೊಡುವುದಿಲ್ಲ' ಎಂದು ಹೇಳಿದರು.

'ಹಿಂದೂಗಳಲ್ಲಿ ಯಾರಿಗೆ ಟಿಕೆಟ್ ಕೊಡಬೇಕು ಎನ್ನುವುದನ್ನು ಪಕ್ಷ ತೀರ್ಮಾನಿಸಲಿದೆ. ಡಿ.4ರಂದು ಇಲ್ಲಿ ಸಮನ್ವಯ ಸಮಿತಿ ಸಭೆ ಹಾಗೂ ಡಿ. 5ರಂದು ರಾಜ್ಯ ಕಾರ್ಯಕಾರಿಣಿ ನಡೆಯಲಿದೆ.

ಆ ಸಭೆಗಳಲ್ಲಿ ಅಭ್ಯರ್ಥಿಗಳ ವಿಷಯ ಚರ್ಚೆಗೆ ಬರಬಹುದು' ಎಂದು ಪ್ರತಿಕ್ರಿಯಿಸಿದರು.

Dailyhunt
Disclaimer: This content has not been generated, created or edited by Dailyhunt. Publisher: Prajavani