ಮಡಿಕೇರಿ: ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಆವರಣದಲ್ಲಿ ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಆರಂಭಗೊಂಡಿತು.
ಈ ವೇಳೆ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು, ವಾಹನಗಳನ್ನು ಪೂಲಿಂಗ್ ಸಿಸ್ಟಮ್‍ನಲ್ಲಿ ಬಳಸುವುದು, ಕಸ ವಿಲೇವಾರಿ ಸಂದರ್ಭದಲ್ಲಿ ಹಸಿ ಮತ್ತು ಒಣ ತ್ಯಾಜ್ಯಗಳ ವಿಂಗಡಣೆ, ಸೈಕಲ್ ಬಳಕೆ, ವಾಹನಗಳ ಸ್ವಚ್ಛತೆ ಕುರಿತು ಮಾತನಾಡಿದರು.
ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ 1991 ರಿಂದ 2025ರವರೆಗೆ ಇರುವ ಸಾರಿಗೆ ಇಲಾಖೆಯ ಪ್ರಕರಣಗಳಿಗೂ ಶೇ 50ರಷ್ಟು ರಿಯಾಯಿತಿಯಲ್ಲಿ ದಂಡ ಪಾವತಿಸಿ ಪ್ರಕರಣ ಮುಕ್ತಾಯಗೊಳಿಸಬೇಕಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಹ ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್ ಮಾತನಾಡಿ, ವಾಹನಗಳ ನಿರ್ವಹಣೆ, ಗಿಡ ನೆಡುವುದು, ಶಾಲಾ ಮಕ್ಕಳಲ್ಲಿ ವಾಯು ಮಾಲಿನ್ಯದ ಬಗ್ಗೆ ಜಾಗೃತಿ ಸಂಬಂಧ ವಿವಿಧ ಸ್ಪರ್ಧೆಗಳನ್ನು ಆಯೋಜಿಸುವುದು, ಮತ್ತಿತರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಕೆಎಸ್‍ಆರ್‌ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕ ದರ್ಶನ್, ಕಚೇರಿಯ ಅಧೀಕ್ಷಕರಾದ ಸಲೀಮಾ, ಮೋಹನ್ ಕುಮಾರ್, ಮೋಟಾರು ವಾಹನ ನಿರೀಕ್ಷಕರಾದ ಮೋಹನ್ ಕುಮಾರ್, ಪ್ರದೀಪ್, ಶಶಿಕುಮಾರ್, ರೀಟಾ ಭಾಗವಹಿಸಿದ್ದರು.
261104-51-1403539315

