ಸಂಕ್ಷಿಪ್ತ ಮಾಹಿತಿ - ಪೂರ್ಣ ವಿವರಣೆಗೆ ಕ್ಲಿಕ್ ಮಾಡಿಪ್ರಮುಖ ಮುಖ್ಯಾಂಶಗಳ ಸಂಕ್ಷಿಪ್ತ ಸಾರಾಂಶ
ವೈಟ್ ಹೌಸ್ ಡಿನ್ನರ್ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ವರದಿ: ಟ್ರಂಪ್ ಸುರಕ್ಷಿತ
ಒಂದು ಸಾಲಿನಲ್ಲಿವಾಷಿಂಗ್ಟನ್‌ನ ವೈಟ್ ಹೌಸ್ ಡಿನ್ನರ್ ಕಾರ್ಯಕ್ರಮದಲ್ಲಿ ಗುಂಡಿನ ಶಬ್ದ ಕೇಳಿಬಂದಿದ್ದು, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.
ಪ್ರಮುಖ ಸಂಗತಿಗಳು• ಗುಂಡಿನ ಶಬ್ದವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್ ಕಾರ್ಯಕ್ರಮದ ವೇಳೆ ಗುಂಡಿನ ಶಬ್ದ ಕೇಳಿಬಂದಿದೆ.• ಟ್ರಂಪ್ ಮತ್ತು ಗಣ್ಯರ ಸುರಕ್ಷತೆಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಅವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಟ್ರಂಪ್‌ಗೆ ಯಾವುದೇ ಗಾಯಗಳಾಗಿಲ್ಲ.• ಶಂಕಿತನ ಬಂಧನ ಮತ್ತು ತನಿಖೆವರದಿಗಳ ಪ್ರಕಾರ ಶಂಕಿತ ವ್ಯಕ್ತಿಯನ್ನು ಬಂಧಿಸಲಾಗಿದೆ ಮತ್ತು ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿರುವುದು ವರದಿಯಾಗಿದೆ.• ಹಿಂದಿನ ದಾಳಿಯ ಪ್ರಯತ್ನಗಳುಇದಕ್ಕೂ ಮುನ್ನ 2024ರಲ್ಲಿ ಪೆನ್ಸಿಲ್ವೇನಿಯಾ ಮತ್ತು ವೆಸ್ಟ್ ಪಾಮ್ ಬೀಚ್‌ನಲ್ಲಿ ಟ್ರಂಪ್ ಅವರನ್ನು ಹತ್ಯೆಗೈಯಲು ಎರಡು ಬಾರಿ ವಿಫಲ ಯತ್ನಗಳು ನಡೆದಿದ್ದವು.ಪ್ರಮುಖ ಅಂಕಿಅಂಶಗಳು2024ಈ ಹಿಂದೆಯೂ ಟ್ರಂಪ್ ಹತ್ಯೆಗೈಯಲು ಯತ್ನಎಐ ಬಳಸಿ ಸಂಸ್ಕರಿಸಲಾಗಿದೆ. ಪಿವಿ ಡಿಜಿಟಲ್ ತಂಡ ಪರಿಶೀಲಿಸಿದೆ
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಗವಹಿಸಿದ್ದ ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್ ಕಾರ್ಯಕ್ರಮದಲ್ಲಿ ಗುಂಡಿನ ಶಬ್ದ ಕೇಳಿಬಂದಿದೆ ಎಂದು ವರದಿಯಾಗಿದೆ.
ತಕ್ಷಣವೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್ ಅವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಾಷಿಂಗ್ಟನ್ ಹಿಲ್ಟನ್ ಹೋಟೆಲ್ ಸ್ಥಳದಲ್ಲಿ ಜೋರಾಗಿ ಗುಂಡಿನ ಶಬ್ದ ಕೇಳಿಬಂದಿದೆ. ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಳು ಮೇಜಿನ ಕೆಳಗೆ ಅಡಗಿಕೊಳ್ಳುತ್ತಿರುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
ಪೊಲೀಸರು ಹೆಚ್ಚಿನ ಭದ್ರತೆ ಏರ್ಪಡಿಸಿದ್ದಾರೆ. ಹೆಚ್ಚಿನ ಸುರಕ್ಷತೆಗಾಗಿ ಹೆಲಿಕಾಪ್ಟರ್ ರವಾನಿಸಲಾಗಿದೆ.
ಡೊನಾಲ್ಡ್ ಟ್ರಂಪ್ ಅವರಿಗೆ ಯಾವುದೇ ಗಾಯವಾಗಿಲ್ಲ ಎಂದು ಸಿಎನ್‌ಎನ್ ಹಾಗೂ ಅಮೆರಿಕದ ಇತರೆ ಮಾಧ್ಯಮಗಳು ವರದಿ ಮಾಡಿವೆ.
ಶಂಕಿತನ ಬಂಧನ…
ಮಗದೊಂದು ವರದಿಯ ಪ್ರಕಾರ ಶಂಕಿತ ವ್ಯಕ್ತಿಯನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಓರ್ವ ಗಾಯಗೊಂಡಿರುವ ಬಗ್ಗೆಯೂ ವರದಿಯಾಗಿದೆ. ಈ ಕುರಿತು ನಿಖರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಸ್ವಾಗತ ಭಾಷಣದ ನಂತರ ಟ್ರಂಪ್ ಮಾತನಾಡಲು ನಿಗದಿಯಾಗಿದ್ದ ಭೋಜನಕೂಟದ ಸಮಯದಲ್ಲಿ ಗುಂಡಿನ ಶಬ್ದ ಕೇಳಿಸಿದೆ.
2024ರಲ್ಲೂ ಟ್ರಂಪ್ ಮೇಲೆ ದಾಳಿ…
2024ರಲ್ಲಿ ಪೆನ್ಸಿಲ್ವೇನಿಯಾದಲ್ಲಿ ನಡೆದ ಚುನಾವಣಾ ಪ್ರಚಾರದ ಸಮಾವೇಶದಲ್ಲಿ ಟ್ರಂಪ್ ಅವರನ್ನು ಗುಂಡಿಕ್ಕಿ ಹತ್ಯೆಗೈಯಲು ಯತ್ನ ನಡೆದಿತ್ತು. ಅಲ್ಲದೆ ಟ್ರಂಪ್ ಅವರ ಕಿವಿಗೆ ಗಾಯವಾಗಿತ್ತು. ಇದಾದ ಬಳಿಕ ವೆಸ್ಟ್ ಪಾಮ್ ಬೀಚ್ ಕೋರ್ಸ್‌ನಲ್ಲಿ ಮತ್ತೊಮ್ಮೆ ಹತ್ಯೆಗೈಯುವ ಯತ್ನ ನಡೆದಿತ್ತು. ಈ ಎರಡೂ ದಾಳಿಯಿಂದಲೂ ಟ್ರಂಪ್ ಪಾರಾಗಿದ್ದರು.

