ಹಾನಗಲ್: ವಿದ್ಯುತ್ ಖಾಸಗೀಕರಣದ ಆತಂಕ ಬೇಡ. ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗೀಕರಣ ಮಾಡಲು ಬಿಡುವುದಿಲ್ಲ ಎಂದು ಹೆಸ್ಕಾಂ ನಿಗಮದ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ ಸ್ಪಷ್ಟಪಡಿಸಿದರು.
ಶುಕ್ರವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ವಿದ್ಯುತ್ ಖಾಸಗೀಕರಣ ಬಿಜೆಪಿ ಸರ್ಕಾರದ ಪ್ರಸ್ತಾವನೆ ಯಾಗಿತ್ತು.
ಕೆಇಆರ್‌ಸಿ (ಕರ್ನಾಟಕ ವಿದ್ಯುತ್‌ಶಕ್ತಿ ನಿಯಂತ್ರಣ ಆಯೋಗ) ಈ ವಿಷಯವನ್ನು ಮುನ್ನಲೆಗೆ ತಂದಿದ್ದರಿಂದ ಈ ಗೊಂದಲ ಉಂಟಾಗಿ ಗ್ರಾಹಕರಿಗೆ, ರೈತರಿಗೆ, ಸಾರ್ವಜನಿಕರಿಗೆ ಭಯ ಹುಟ್ಟಿಸಿದೆ ಎಂದರು.
ಮುಖ್ಯಮಂತ್ರಿ ಶಿವಕುಮಾರ್ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗೀಕರಣ ಮಾಡುವುದಿಲ್ಲ ಎಂದು ಸ್ಪಷ್ಠಪಡಿಸಿದ್ದಾರೆ ಎಂದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260705-22-781874881

