Dailyhunt Logo
  • Light mode
    Follow system
    Dark mode
    • Play Story
    • App Story
ವಿಕಸಿತ ಭಾರತ ಗ್ಯಾರಂಟಿ ರೋಜಗಾರ್ ಕುರಿತು ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ

ವಿಕಸಿತ ಭಾರತ ಗ್ಯಾರಂಟಿ ರೋಜಗಾರ್ ಕುರಿತು ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ

ಕೊಪ್ಪಳ: ವಿಕಸಿತ ಭಾರತ ಗ್ಯಾರಂಟಿ ರೋಜಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ) ಕುರಿತು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕಾರ್ಯಾಗಾರ ನಡೆಯಿತು.

ಜುಲೈ 1ರಿಂದ ದೇಶದಾದ್ಯಂತ ಜಾರಿಯಾಗಿರುವ ವಿಬಿ-ಜಿ ರಾಮ್ ಜಿ ಯೋಜನೆಯನ್ನು ಅನುಷ್ಠಾನಗೊಳಿಸುವ ಕುರಿತಾಗಿ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಅವರು ಮಾರ್ಗದರ್ಶನ ಒದಗಿಸಿದರು.

ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ, ಕಾರಟಗಿ ತಾ.ಪಂ ಸಹಾಯಕ ನಿರ್ದೇಶಕ ವೈ.ವನಜಾ, ಕುಷ್ಟಗಿ ತಾ.ಪಂ ಸಹಾಯಕ ನಿರ್ದೇಶಕ ನಿಂಗನಗೌಡ ಹಾಗೂ ಪಿಡಿಒ ಶಂಶೀರ್ ಅಲಿ ಅವರು ತರಬೇತಿಯಲ್ಲಿ ಯೋಜನೆ ಕಾರ್ಯವೈಖರಿ ವಿಧಾನಗಳ ಕುರಿತು ಪಿಪಿಟಿ ಮುಖಾಂತರ ಮಾಹಿತಿ ವಿವರಿಸಿದರು.

ಅನುಷ್ಠಾನ ಇಲಾಖೆಗಳಾದ ಕೃಷಿ, ಅರಣ್ಯ, ತೋಟಗಾರಿಕೆ, ರೇಷ್ಮೆ, ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260705-35-1456311836

Dailyhunt
Disclaimer: This content has not been generated, created or edited by Dailyhunt. Publisher: Prajavani