ದಾವಣಗೆರೆ: 'ಕೇಂದ್ರ ಸರ್ಕಾರ ನಡೆಸಲು ಉದ್ದೇಶಿಸಿರುವ ಜಾತಿ ಗಣತಿ ವೇಳೆ ವೀರಶೈವ ಲಿಂಗಾಯತ ಸಮು ದಾಯದವರ ಪೈಕಿ ಯಾರು, ಏನೆಂದು ನಮೂದಿಸಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲು ಶೀಘ್ರವೇ ಪಂಚ ಪೀಠಾಧೀಶರು ಸಭೆ ಸೇರಿ ಸಮಾಲೋಚನೆ ನಡೆಸಲಿದ್ದೇವೆ' ಎಂದು ಶ್ರೀಶೈಲ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ ತಿಳಿಸಿದರು.
'ದಾವಣಗೆರೆಯಲ್ಲೇ ಸಭೆ ಸೇರುವ ಉದ್ದೇಶವಿದೆ. ಆದರೆ, ದಿನಾಂಕ ಇನ್ನೂ ನಿಗದಿಯಾಗಿಲ್ಲ. ಸಮಾನ ಮನಸ್ಕ ವಿರಕ್ತ ಪೀಠದವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯುತ್ತೇವೆ. ಜಾತಿ ಗಣತಿಯ ಬಗ್ಗೆ ಸಮುದಾಯಕ್ಕೆ ಸ್ಪಷ್ಟ ಸಂದೇಶ ನೀಡಲಾಗುವುದು' ಎಂದು ಶನಿವಾರ ಸುದ್ದಿಗಾರರಿಗೆ ಹೇಳಿದರು.
'ಜಾತಿ ಆಧಾರಿತ ಮೀಸಲಾತಿಗಿಂತ ಆರ್ಥಿಕ ಪರಿಸ್ಥಿತಿ ಆಧಾರಿತ ಮೀಸಲಾತಿ ಸೂಕ್ತ. ಎಲ್ಲಾ ಜಾತಿಯಲ್ಲೂ ಶ್ರೀಮಂತರು, ಬಡವರು ಇದ್ದಾರೆ' ಎಂದರು.
ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ:'ಅಯೋಧ್ಯೆಯ ರಾಮ ಮಂದಿರದ ದೇಣಿಗೆ/ ಕಾಣಿಕೆಹಣ ದುರ್ಬಳಕೆ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಬೇಕು. ಧಾರ್ಮಿಕ ಕೇಂದ್ರಗಳಲ್ಲಿ ಈ ರೀತಿ ಆಗದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳ ಬೇಕು' ಎಂದು ಸ್ವಾಮೀಜಿ ಹೇಳಿದರು.
'ಧಾರ್ಮಿಕ ಕೇಂದ್ರಗಳಲ್ಲಿ ಈ ರೀತಿಅವ್ಯವಹಾರ ನಡೆದಾಗ ಜನರ ಭಾವನೆಗಳಿಗೆ ಧಕ್ಕೆ ಉಂಟಾಗುತ್ತದೆ. ಅವ್ಯವ ಹಾರದ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಹಚ್ಚಬೇಕು' ಎಂದರು.
ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260705-51-799308520

