Dailyhunt Logo
  • Light mode
    Follow system
    Dark mode
    • Play Story
    • App Story
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಡಿ.ಕೆ. ಶಿವಕುಮಾರ್

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: 'ಕಾಂಗ್ರೆಸ್ ಸರ್ಕಾರದ ಹೆಮ್ಮೆಯ ಗ್ಯಾರಂಟಿ ಯೋಜನೆಗಳಾದ 'ಗೃಹಲಕ್ಷ್ಮಿ' ಮತ್ತು 'ಗೃಹಜ್ಯೋತಿ' ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು' ಎಂದು ಮುಖ್ಯಮಂತ್ರಿ ಡಿ.ಕೆ.

ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, 'ಕೆಲವರು ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಬ್ಯಾಂಕ್‌ ಖಾತೆ ತೆರೆದು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ದೃಢೀಕರಣಕ್ಕಾಗಿ, ಅವರ ಹೆಸರು, ವಿಳಾಸ, ಖಾತೆ ಸಂಖ್ಯೆ ಖಚಿತಪಡಿಸಿಕೊಳ್ಳಲು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಹೇಳಿದ್ದೇವೆ. ಅದರ ಹೊರತು ಯೋಜನೆಗಳನ್ನು ನಿಲ್ಲಿಸಲು ಅಲ್ಲ' ಎಂದು ಅವರು ಸ್ಪಷ್ಟಪಡಿಸಿದ್ದಾರೆ.

'ಎಲ್ಲ ಗ್ಯಾರಂಟಿ ಯೋಜನೆಗಳು ಶೇಕಡಾ ನೂರಕ್ಕೆ ನೂರರಷ್ಟು ಮುಂದುವರಿಯುತ್ತವೆ. ಯಾರೂ ಆತಂಕಪಡುವ ಅವಶ್ಯಕತೆ ಇಲ್ಲ' ಎಂದೂ ಅವರು ಹೇಳಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Prajavani