Dailyhunt Logo
  • Light mode
    Follow system
    Dark mode
    • Play Story
    • App Story
ಯಕ್ಷಗಾನ ತಾಳಮದ್ದಳೆ ಸಪ್ತಾಹ ನವೆಂಬರ್ 22ರಿಂದ 28ರವರೆಗೆ

ಯಕ್ಷಗಾನ ತಾಳಮದ್ದಳೆ ಸಪ್ತಾಹ ನವೆಂಬರ್ 22ರಿಂದ 28ರವರೆಗೆ

ಮಂಗಳೂರು: 'ಯಕ್ಷಾಂಗಣ ಮಂಗಳೂರು' ಯಕ್ಷಗಾನ ಚಿಂತನ - ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿಶ್ವವಿದ್ಯಾಲಯ ಡಾ.ದಯಾನಂದ ಪೈ, ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ಯಕ್ಷಗಾನ ತಾಳಮದ್ದಳೆ ಸಪ್ತಾಹ- ಚತುರ್ದಶ ಸರಣಿಯನ್ನು ನವೆಂಬರ್ 22ರಿಂದ 28ರವರೆಗೆ ಹಮ್ಮಿಕೊಂಡಿದೆ.

14ನೇ ವರ್ಷದ ಸಪ್ತಾಹ 'ಸಂಘಟನಾ ಪರ್ವ'ವು ನಗರದ ವಿಶ್ವವಿದ್ಯಾಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ. ಈ ಸಂಬಂಧ ಚರ್ಚಿಸಲು ಈಚೆಗೆ ಇಲ್ಲಿ ಯಕ್ಷಾಂಗಣದ ಕಾರ್ಯಕಾರಿ ಸಮಿತಿ ಸಭೆ ನಡೆಯಿತು.

ನ.22ರಂದು ಸಂಜೆ 4ಕ್ಕೆ ಸಪ್ತಾಹದ ಉದ್ಘಾಟನಾ ಸಮಾರಂಭ ನಡೆಯಲಿದೆ. ಯಕ್ಷಾಂಗಣದ ಗೌರವಾಧ್ಯಕ್ಷ ಎ.ಜೆ.ಶೆಟ್ಟಿ ಅಧ್ಯಕ್ಷತೆಯಲ್ಲಿ ಮಂಗಳೂರು ವಿ.ವಿ.ಕುಲಪತಿ ಪ್ರೊ. ಪಿ.ಎಲ್.ಧರ್ಮ ಕಾರ್ಯಕ್ರಮ ಉದ್ಘಾಟಿಸುವರು. ಸಮಾರಂಭದಲ್ಲಿ ಹಿರಿಯ ಕಲಾಪೋಷಕರೊಬ್ಬರಿಗೆ ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ ನೀಡಲಾಗುವುದು ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದರು.

ಪ್ರತಿದಿನ ಆಯ್ದ ತಂಡಗಳ ತಾಳಮದ್ದಳೆ, ಅಗಲಿದ ಹಿರಿಯ ಕಲಾವಿದರ ಸ್ಮರಣೆ, ಸಾಧಕರಿಗೆ ಸನ್ಮಾನ ನಡೆಯಲಿವೆ. ನ.28ರಂದು ಯಕ್ಷಗಾನ ಆಟ- ಕೂಟಗಳ ಪ್ರಸಿದ್ಧ ಕಲಾವಿದರೊಬ್ಬರನ್ನು ನಿಧಿ ಸಮರ್ಪಣೆಯೊಂದಿಗೆ ಯಕ್ಷಾಂಗಣ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದರು.

ಯಕ್ಷಾಂಗಣದ ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್, ಸಂಚಾಲಕಿ ನಿವೇದಿತಾ ಎನ್.ಶೆಟ್ಟಿ ಬೆಳ್ಳಿಪ್ಪಾಡಿ, ಕಾರ್ಯದರ್ಶಿಗಳಾದ ಕೆ.ಲಕ್ಷೀನಾರಾಯಣ ರೈ ಹರೇಕಳ, ಸುಮಾ ಪ್ರಸಾದ್, ಕಾರ್ಯಕಾರಿಣಿ ಸದಸ್ಯರಾದ ಸುಧಾಕರ ರಾವ್ ಪೇಜಾವರ, ಕರುಣಾಕರ ಶೆಟ್ಟಿ ಪಣಿಯೂರು, ಸಿದ್ದಾರ್ಥ ಅಜ್ರಿ ಉಪಸ್ಥಿತರಿದ್ದರು.

261104-29-1755205914

Dailyhunt
Disclaimer: This content has not been generated, created or edited by Dailyhunt. Publisher: Prajavani