ಜಿನೀವಾ (ಎಪಿ): ಯೆಮನ್‌ನಲ್ಲಿ ಸೆಪ್ಟೆಂಬರ್ 19ರಿಂದ 26ರವರೆಗೆ ನಡೆದ ಯುದ್ಧದಲ್ಲಿ 164 ಸಾವು ಸಂಭವಿಸಿವೆ ಮತ್ತು 645 ಜನರು ಗಾಯಗೊಂಡಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ತಿಳಿಸಿದೆ.
ಆಗಸ್ಟ್ 6ರಿಂದ ಈಚೆಗೆ 838 ಮಂದಿ ಮೃತಪಟ್ಟಿದ್ದಾರೆ ಮತ್ತು 4,481 ಮಂದಿ ಗಾಯಗೊಂಡಿದ್ದಾರೆ.
ಇರಾನ್ ಬೆಂಬಲಿತ ಹೂಥಿ ಬಂಡುಕೋರರು ಹಾಗೂ ಯೆಮನ್ ಸರ್ಕಾರಿ ಪಡೆಗಳ ನಡುವೆ ನಡೆದ ಯುದ್ಧದ ಪರಿಣಾಮವಾಗಿ 1,80,000 ಜನರು ಸ್ಥಳಾಂತರಗೊಂಡಿದ್ದಾರೆ.
ಇಸ್ರೇಲ್ ದಾಳಿ:
ಗಾಜಾ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಶಿಫಾ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಇಸ್ರೇಲ್ ಸೇನೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

