Dailyhunt Logo
  • Light mode
    Follow system
    Dark mode
    • Play Story
    • App Story
ಯುವಕರಿಂದ ಗಂಗಾವತಿಯಲ್ಲಿ ಲೋಕತಾಂತ್ರಿಕ ಪ್ರತಿಜ್ಞೆ ಸ್ವೀಕಾರ

ಯುವಕರಿಂದ ಗಂಗಾವತಿಯಲ್ಲಿ ಲೋಕತಾಂತ್ರಿಕ ಪ್ರತಿಜ್ಞೆ ಸ್ವೀಕಾರ

ಗಂಗಾವತಿ: ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಮೂಡಿಸುವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಯುವಜನರ ಪಾತ್ರವನ್ನು ಉತ್ತೇಜಿಸುವ ಉದ್ದೇಶದಿಂದ ನಗರದಲ್ಲಿ ನಡೆದ ವಿಕಸಿತ ಭಾರತ ಯುವ ಸಂವಾದ ಕಾರ್ಯಕ್ರಮದಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಯುವ ನಾಗರಿಕರು ಲೋಕತಾಂತ್ರಿಕ ಪ್ರತಿಜ್ಞೆ ಸ್ವೀಕರಿಸಿದರು.

ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಮೇರಾ ಯುವ ಭಾರತ ಕೇಂದ್ರ, ಕೊಪ್ಪಳ ವತಿಯಿಂದ ಕೊಲ್ಲಿನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಕ್ರಮ ನಡೆಯಿತು.

ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರೊಂದಿಗಿನ ಸಂವಾದದಲ್ಲಿ ಆಡಳಿತದಲ್ಲಿ ಯುವಜನರ ಪಾಲ್ಗೊಳ್ಳುವಿಕೆ, ನಾಗರಿಕ ಜವಾಬ್ದಾರಿ, ಪ್ರಜಾಪ್ರಭುತ್ವದ ಮಹತ್ವ ಹಾಗೂ ಮೊದಲ ಬಾರಿಗೆ ಮತದಾನ ಮಾಡುವ ಯುವಕರ ಪಾತ್ರ ಸೇರಿದಂತೆ ಹಲವು ವಿಚಾರಗಳ ಕುರಿತು ವಿದ್ಯಾರ್ಥಿಗಳು ಪ್ರಶ್ನೆಗಳನ್ನು ಕೇಳಿದರು.

ಯುವ ಐಕಾನ್ ಸಂಜಯಕುಮಾರ ವೈ. ಬಿರಾದಾರ, ಕಾಲೇಜಿನ ಉಪನ್ಯಾಸಕ ಪ್ರೊ. ಶಿವಾನಂದ ಮೇಟಿ, ಜಿಲ್ಲಾ ಯುವ ಅಧಿಕಾರಿ ಮೇಘಾ ಜಿ.ಕೆ. ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಲೋಕಾರ್ಪಣೆ: ಇಲ್ಲಿನ ತಾಲ್ಲೂಕು ಆಸ್ಪತ್ರೆಯಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮ್ಯಾಮೊಗ್ರಫಿ ಮತ್ತು ಮಿಡ್‌ವೈಫರಿ ಲೆಡ್ ಕೇರ್ ಘಟಕವನ್ನು ಶಾಸಕ ರೆಡ್ಡಿ ಉದ್ಘಾಟಿಸಿದರು.

ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಹಾಗೂ ಸ್ತನಗಳಲ್ಲಿನ ಗಡ್ಡೆಗಳನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಲು ಮ್ಯಾಮೊಗ್ರಫಿ ನೆರವಾಗುತ್ತದೆ. ಮಿಡ್‌ವೈಫರಿ ಲೆಡ್ ಕೇರ್ ಯುನಿಟ್ ಸೌಲಭ್ಯದಿಂದ ಗರ್ಭಿಣಿಯರಿಗೆ ಸುರಕ್ಷಿತ ಹೆರಿಗೆ ಆರೈಕೆ, ತಾಯಿ ಮತ್ತು ನವಜಾತ ಶಿಶುವಿನ ಆರೋಗ್ಯದ ಕಾಳಜಿ ಹಾಗೂ ಅಗತ್ಯ ವೈದ್ಯಕೀಯ ಮಾರ್ಗದರ್ಶನ ಒದಗಿಸುವ ವಿಶೇಷ ಘಟಕ ಇದಾಗಿದೆ ಎಂದು ರೆಡ್ಡಿ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕಿ ಡಾ. ರಜನಿ ಎಂ., ಮಾತೃ ಆರೋಗ್ಯ ವಿಭಾಗದ ಉಪನಿರ್ದೇಶಕಿ ಡಾ. ಇಂದಿರಾ ಕಬಾಡಿ, ವಿಭಾಗೀಯ ಜಂಟಿ ನಿರ್ದೇಶಕ ಡಾ. ಶಂಕರಪ್ಪ ಮೈಲಾರಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಈಶ್ವರ ಸವಡಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮನೋಹರಗೌಡ ಹೇರೂರು, ನಗರ ಮಂಡಲ ಅಧ್ಯಕ್ಷ ಚಂದ್ರಶೇಖರ ಹೇರೂರು, ಗ್ರಾಮೀಣ ಮಂಡಲ ಅಧ್ಯಕ್ಷ ಡಿ.ಕೆ. ಆಗೋಲಿ, ಮುಖಂಡರಾದ ವೆಂಕಟೇಶ್ ಜಬ್ಬಲಗುಡ್ಡ, ಬಸವರಾಜ, ನಾಗರಾಜ್, ಪುಂಡನಗೌಡ ಭಾಗವಹಿಸಿದ್ದರು.

ನಿವೇಶನ ಹಕ್ಕುಪತ್ರಗಳ ಹಸ್ತಾಂತರ

ಗಂಗಾವತಿ: ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಗಂಗಾವತಿ ವಿಧಾನಸಭಾ ಕ್ಷೇತ್ರದ ಹಾಸಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೆಂಕಟಾಪುರದ 24 ಅರ್ಹ ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರಗಳನ್ನು ಶಾಸಕರು ವಿತರಿಸಿದರು.

ತಹಶೀಲ್ದಾರ್‌ ವಿನಾಯಕ ಕೋಡಬೋಲೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ನಿರ್ದೇಶಕಿ ಉಷಾ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ನಾಗರತ್ನ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

261103-35-1228703845

Dailyhunt
Disclaimer: This content has not been generated, created or edited by Dailyhunt. Publisher: Prajavani