
ಬೆಂಗಳೂರು: ನಗರದ ಫ್ರೀಡಂ ಪಾರ್ಕ್‌ನಲ್ಲಿ (Freedom Park) ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ (ASHA workers) ಹೋರಾಟಕ್ಕೆ ಮುಖ್ಯಮಂತ್ರಿಗಳು ತಕ್ಷಣ ಸ್ಪಂದಿಸಿ, ಅವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ (Anita Kumaraswamy) ಒತ್ತಾಯಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಮೂಲಕ ಪ್ರತಿಕ್ರಿಯಿಸಿರುವ ಅವರು, ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಫ್ರೀಡಂ ಪಾರ್ಕಿನಲ್ಲಿ ಆಶಾ ಸಹೋದರಿಯರು ಹಗಲು ರಾತ್ರಿ ಎನ್ನದೇ ಕಳೆದೊಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರೂ, ಸೂಕ್ತ ಕ್ರಮ ಕೈಗೊಳ್ಳದ ಕಾಂಗ್ರೆಸ್ ಸರ್ಕಾರದ ನಡೆ ಅಮಾನವೀಯ” ಎಂದು ಅವರು ಆರೋಪಿಸಿದ್ದಾರೆ.
ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೆ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಹೋರಾಟ ಹಾಗೂ ಅವರ ನೋವಿನ ಕುರಿತು ಸರ್ಕಾರ ನಿರ್ಲಕ್ಷ್ಯ ಧೋರಣೆ ತಾಳುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಕೂಡಲೇ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಅನಿತಾ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
: ಕ್ಷೌರದ ಅಂಗಡಿಯ ಕುರ್ಚಿಯ ಮೇಲೆ ಆರಾಮವಾಗಿ ಮಲಗಿ ಮಸಾಜ್ ಮಾಡಿಸಿಕೊಂಡ ಕೋತಿ ; ವಿಡಿಯೋ ವೈರಲ್!
