Dailyhunt Logo
  • Light mode
    Follow system
    Dark mode
    • Play Story
    • App Story

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾ** ಕೇಸ್‌: ಆರೋಪಿಗಳ 4 ಹೋಟೆಲ್‌ ನೆಲಸಮ

Pratidhvani 3 weeks ago

ರಾಜಸ್ಥಾನದ ಜೈಪುರದಲ್ಲಿ 13 ವರ್ಷದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾ** ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಹೋಟೆಲ್‌ಗಳನ್ನು ಜಿಲ್ಲಾಡಳಿತ ಮತ್ತು ಪೊಲೀಸರು ನೆಲಸಮಗೊಳಿಸಿದ್ದಾರೆ.

ಪೊಲೀಸರ ಪ್ರಕಾರ, ಜೂನ್ 18ರಂದು ಬಾಲಕಿ ಮನೆಯಿಂದ ಕಾಣೆಯಾಗಿದ್ದಳು. ಬಳಿಕ ರಿಕ್ಷಾ ಚಾಲಕನೊಬ್ಬ ಆಕೆಯನ್ನು ಹೋಟೆಲ್ ಮಾಲೀಕರಿಗೆ ಒಪ್ಪಿಸಿದ್ದಾನೆ ಎನ್ನಲಾಗಿದೆ.

ನಂತರ ಐದು ದಿನಗಳ ಕಾಲ ನಗರದ ವಿವಿಧ ಹೋಟೆಲ್‌ಗಳಲ್ಲಿ 30ಕ್ಕೂ ಹೆಚ್ಚು ಮಂದಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಈ ಪ್ರಕರಣದಲ್ಲಿ ಕೆಲವು ಹೋಟೆಲ್ ಮಾಲೀಕರು ಮತ್ತು ಸಿಬ್ಬಂದಿಯೂ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದುವರೆಗೆ 12 ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.

ಈ ಘಟನೆ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಪ್ರಕರಣದ ಕುರಿತು ಕಾಂಗ್ರೆಸ್ ಕೂಡ ಪ್ರತಿಭಟನೆ ನಡೆಸಿದೆ.

Dailyhunt
Disclaimer: This content has not been generated, created or edited by Dailyhunt. Publisher: Pratidhvani