Dailyhunt Logo
  • Light mode
    Follow system
    Dark mode
    • Play Story
    • App Story

ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದ ಕುಂದಾಪುರ: ಬಾರ್ಕೂರು‌ ಮೂಲದ ವ್ಯಕ್ತಿಯ ಬರ್ಬರ ಹ**

Pratidhvani 1 week ago

ಕುಂದಾಪುರ: ಕುಂದಾಪುರದ ಹೋಲಿ ರೋಸರಿ ಚರ್ಚ್ ಎದುರು ಇಂದು ಬೆಳ್ಳಂಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಮೃತಪಟ್ಟಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಮುಂಜಾನೆ ಸುಮಾರು 3.15ರಿಂದ 3.30ರ ವೇಳೆಗೆ ಐವನ್ ಅವರು ತಮ್ಮ ಪರಿಚಯದ ಮಹಿಳೆಯೊಂದಿಗೆ ಕಾರಿನಲ್ಲಿ ಚರ್ಚ್ ರಸ್ತೆಗೆ ಬಂದಿದ್ದರು.

ಈ ವೇಳೆ ಥಾರ್ ವಾಹನದಲ್ಲಿ ಬಂದ ಡೆರಿಕ್ ಎಂಬಾತ ಕಾರಿನಿಂದ ಇಳಿದು ಐವನ್ ಅವರ ಮೇಲೆ ಗನ್‌ನಿಂದ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದಾನೆ.

ಪ್ರಾಥಮಿಕ ತನಿಖೆಯಲ್ಲಿ ಐವನ್ ಮತ್ತು ಡೆರಿಕ್ ನಡುವೆ ಹಣಕಾಸು ಹಾಗೂ ಇತರ ವ್ಯವಹಾರಗಳಿಗೆ ಸಂಬಂಧಿಸಿದ ಮನಸ್ತಾಪವೇ ಘಟನೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿ ಡೆರಿಕ್ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಎಸ್ಪಿ ಹರಿರಾಂ ಶಂಕರ್, ಹೆಚ್ಚುವರಿ ಎಸ್ಪಿ ಸುಧಾಕರ್ ನಾಯಕ್, ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೋಕೋ ತಂಡವೂ ಸ್ಥಳ ಪರಿಶೀಲನೆ ನಡೆಸಿದೆ. ಘಟನೆ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Dailyhunt
Disclaimer: This content has not been generated, created or edited by Dailyhunt. Publisher: Pratidhvani