Dailyhunt Logo
  • Light mode
    Follow system
    Dark mode
    • Play Story
    • App Story

ಬೆಂಗಳೂರಲ್ಲಿ ಮೊಳಗಿದ ಪೊಲೀಸರ ಗುಂಡಿನ ಸದ್ದು: ಕೊ** ಆರೋಪಿ ಕಾಲಿಗೆ ಗುಂಡೇಟು

Pratidhvani 1 week ago

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ಸೋಮಸುಂದ್ರಪಾಳ್ಯದಲ್ಲಿ ನಸುಕಿನ ಜಾವ ಪೊಲೀಸರ ಬಂದೂಕು ಸದ್ದು ಮಾಡಿದ್ದು, ಮಾರಕಾಸ್ತ್ರಗಳೊಂದಿಗೆ ಓಡಾಡುತ್ತಿದ್ದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಝೀಶಾನ್ ಎಂದು ಗುರುತಿಸಲಾಗಿದೆ.

ಹಲವು ಅಪರಾಧ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಝೀಶಾನ್, ರೌಡಿ ಶೀಟರ್ ಆದಿಲ್ ಅಕ್ಮಲ್ನ ಸಹಚರನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯ ಸುಹೇಲ್ ಕೊಲೆ ಪ್ರಕರಣದಲ್ಲೂ ಆದಿಲ್ ಅಕ್ಮಲ್ ಆರೋಪಿ ಎಂದು ತಿಳಿದುಬಂದಿದೆ.

 ಸೋಮಸುಂದ್ರಪಾಳ್ಯ ಕೆರೆ ಬಳಿ ಝೀಶಾನ್ ಮಾರಕಾಸ್ತ್ರಗಳೊಂದಿಗೆ ಓಡಾಡುತ್ತಿದ್ದು, ಮತ್ತೊಂದು ಅಪರಾಧ ಕೃತ್ಯ ಎಸಗಲು ಸಂಚು ರೂಪಿಸಿದ್ದಾನೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಬಂಡೇಪಾಳ್ಯ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಚಿನ್ ಹಾಗೂ ಕ್ರೈಂ ಸಿಬ್ಬಂದಿ ಸಂದೀಪ್ ಕಾಂಬ್ಳೆ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಲು ತೆರಳಿತ್ತು.

ಈ ವೇಳೆ ಝೀಶಾನ್, ಪೊಲೀಸ್ ಸಿಬ್ಬಂದಿ ಸಂದೀಪ್ ಕಾಂಬ್ಳೆ ಅವರ ಕೈಗೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ತಕ್ಷಣ ಶರಣಾಗುವಂತೆ ಪೊಲೀಸರು ಸೂಚಿಸಿದರೂ ಆರೋಪಿ ಮಾತು ಕೇಳದೆ ಮತ್ತೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಪರಿಸ್ಥಿತಿ ನಿಯಂತ್ರಿಸಲು ಪಿಎಸ್‌ಐ ಸಚಿನ್ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಕೆ ನೀಡಿದ್ದಾರೆ. ಆದರೂ ಆರೋಪಿ ಪಿಎಸ್‌ಐ ಸಚಿನ್ ಅವರ ಮೇಲೂ ದಾಳಿಗೆ ಮುಂದಾದ ಹಿನ್ನೆಲೆಯಲ್ಲಿ, ಪೊಲೀಸರು ಸ್ವಯಂ ರಕ್ಷಣೆಗಾಗಿ ಝೀಶಾನ್‌ನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಗುಂಡಿನ ದಾಳಿಯಲ್ಲಿ ಗಾಯಗೊಂಡ ಆರೋಪಿ ಝೀಶಾನ್ ಹಾಗೂ ಹಲ್ಲೆಯಿಂದ ಗಾಯಗೊಂಡ ಪೊಲೀಸ್ ಸಿಬ್ಬಂದಿ ಸಂದೀಪ್ ಕಾಂಬ್ಳೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರಿಗೂ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಬಂಡೇಪಾಳ್ಯ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Pratidhvani