Dailyhunt Logo
  • Light mode
    Follow system
    Dark mode
    • Play Story
    • App Story

GOOD NEWS : ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಸಿಹಿಸುದ್ದಿ ಸ್ವಯಂ ಉದ್ಯೋಗಕ್ಕೆ ಅರ್ಜಿ ಆಹ್ವಾನ

Pratidhvani 17 hrs ago

ಬೆಂಗಳೂರು : ರಾಜ್ಯ ಸರ್ಕಾರವು (State Government) ಮಹಿಳೆಯರಿಗೆ ಸಿಹಿಸುದ್ದಿ(GOOD NEWS) ನೀಡಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ನಗರ ಜಿಲ್ಲೆ ವತಿಯಿಂದ 2026-27ನೇ ಸಾಲಿಗೆ ನಿಗಮದ ಯೋಜನೆಗಳಾದ ಉದ್ಯೋಗಿನಿ, ಚೇತನ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಹಾಗೂ ಧನಶ್ರೀ ಯೋಜನೆಗಳಡಿ ಆರ್ಥಿಕ ಸೌಲಭ್ಯ ಪಡೆದು ಸ್ವಂತ ಉದ್ಯೋಗ ಪ್ರಾರಂಭಿಸಲು ಬಡತನಕ್ಕೆ ಸೇರಿದ ನಿರುದ್ಯೋಗಿ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಮಹಿಳಾ ಅಭ್ಯರ್ಥಿಗಳು https://sevasindhu.karnataka.gov.in ಸೇವಾಸಿಂಧು ಪೋರ್ಟಲ್ ಮೂಲಕ ಅಥವಾ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31, 2026 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7619291200 ಅಥವಾ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಜಿಲ್ಲೆ ಹಾಗೂ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ CJP ನಡೆಸುತ್ತಿರುವ ಪ್ರತಿಭಟನೆಯಲ್ಲಿ ನಟ ನಸೀರುದ್ದೀನ್ ಶಾ ಭಾಗಿ | Naseeruddin Shah

Dailyhunt
Disclaimer: This content has not been generated, created or edited by Dailyhunt. Publisher: Pratidhvani