Dailyhunt Logo
  • Light mode
    Follow system
    Dark mode
    • Play Story
    • App Story
ಕರ್ನಾಟಕ: 1440 ಹೊಸ ಕರೋನಾ ಪ್ರಕರಣಗಳು ಪತ್ತೆ

ಕರ್ನಾಟಕ: 1440 ಹೊಸ ಕರೋನಾ ಪ್ರಕರಣಗಳು ಪತ್ತೆ

Pratidhvani 5 years ago

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಡಿಸೆಂಬರ್‌ 02 ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 1440 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 712 ಹೊಸ ಪ್ರಕರಣಗಳು ಕಂಡು ಬಂದಿವೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 8,87,667 ತಲುಪಿದ್ದು, ಇವರಲ್ಲಿ 8,51,690 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 24,150 ಪ್ರಕರಣಗಳಲ್ಲಿ, 318 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11,808 ಮಂದಿ ಅಸುನೀಗಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Pratidhvani