Dailyhunt Logo
  • Light mode
    Follow system
    Dark mode
    • Play Story
    • App Story
ಕರ್ನಾಟಕ: 4025 ಹೊಸ ಕರೋನಾ ಪ್ರಕರಣ ದಾಖಲು

ಕರ್ನಾಟಕ: 4025 ಹೊಸ ಕರೋನಾ ಪ್ರಕರಣ ದಾಖಲು

Pratidhvani 5 years ago

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಕ್ಟೋಬರ್‌ 29ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 4025 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 2175 ಹೊಸ ಪ್ರಕರಣಗಳು ಕಂಡು ಬಂದಿವೆ.

ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 8,16,809 ತಲುಪಿದ್ದು, ಇವರಲ್ಲಿ 7,41,219 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 64,480 ಪ್ರಕರಣಗಳಲ್ಲಿ, 935 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11,091ಮಂದಿ ಅಸುನೀಗಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Pratidhvani