Dailyhunt Logo
  • Light mode
    Follow system
    Dark mode
    • Play Story
    • App Story

ಪ್ರಶ್ನೆ ಪತ್ರಿಕೆ ಸೋರಿಕೆ ರಾಜಕೀಯ ವಿಚಾರವಲ್ಲ: ಸಿಎಂ ಡಿ.ಕೆ ಶಿವಕುಮಾರ್

Pratidhvani 2 days ago

ಬೆಂಗಳೂರು: "ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ಈಗ ಮಾತನಾಡುವ ಬದಲು ಪ್ರಾರಂಭದಲ್ಲೇ ಮಾತನಾಡಬೇಕಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾರನ್ನೂ ಕಾಪಾಡುವ ಪ್ರಶ್ನೆಯೇ ಕೇಂದ್ರ ಸರ್ಕಾರದ ಮುಂದಿರಬಾರದು" ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬಿಜೆಪಿಯವರೇ ನಿಮ್ಮ ಮಕ್ಕಳೂ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದೇಶದ ಯುವ ಜನತೆಯ ಭವಿಷ್ಯ ಹಾಳಾಗುತ್ತಿದೆ. ವೈಫಲ್ಯವನ್ನು ಬಿಜೆಪಿಯವರು ಒಪ್ಪಿಕೊಳ್ಳಬೇಕು. ಒಬ್ಬ ವ್ಯಕ್ತಿ ರಾಜಿನಾಮೆ ಕೊಡುವುದರಿಂದ ಏನಾಗಲಿದೆ? ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದಾಗ ಇಂತಹ ಘಟನೆ ಬಗ್ಗೆ ಯಾರಾದರೂ ಜವಾಬ್ದಾರಿ ಹೊರಬೇಕಲ್ಲವೇ? ಇದಕ್ಕೆ ಯಾರು ಹೊಣೆ?" ಎಂದು ಕಿಡಿಕಾರಿದರು.

"ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲವೂ ಚರ್ಚೆಯಾಗಬೇಕು. ಟೀಕೆ ಮಾಡಿದಾಗ ನಾವು ಹಾಗೂ ನೀವು ಇಬ್ಬರೂ ಒಪ್ಪಿ ತಿದ್ದಿಕೊಳ್ಳಬೇಕು. ನಾವು ಯುವಕರ ಭವಿಷ್ಯದ ಬಗ್ಗೆ ಆಲೋಚನೆ ಮಾಡುತ್ತಿದ್ದೇವೆ. ಈಗಾಗಲೇ ಸುಮಾರು 100 ಕ್ಕೂ ಹೆಚ್ಚು ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ" ಎಂದರು.

ಪ್ರಶ್ನೆ ಪತ್ರಿಕೆ ಸೋರಿಕೆ ರಾಜಕೀಯ ವಿಚಾರವಲ್ಲ

"ಪ್ರಶ್ನೆ ಪತ್ರಿಕೆ ಸೋರಿಕೆ ಎಂಬುದು ರಾಜಕೀಯ ಪಕ್ಷಗಳ ವಿಚಾರವಲ್ಲ, ದೇಶದ ಭವಿಷ್ಯದ ವಿಚಾರ. ಪಾರದರ್ಶಕ, ಶಕ್ತಿಯುತ, ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಯಾವುದೇ ಪರೀಕ್ಷೆಗಳು ನಡೆದರು ಅವು ಪಾರದರ್ಶಕವಾಗಿರಬೇಕು. ಇಡೀ ಪ್ರಪಂಚ ಭಾರತದ ಯುವ ಜನತೆಯ ಭವಿಷ್ಯದ ಬಗ್ಗೆ ಆಲೋಚನೆ ಮಾಡುತ್ತಿದೆ. ನಮ್ಮ ದೇಶ ಪ್ರತಿಭಾವಂತರ ದೇಶ. ಇಡೀ ಪ್ರಪಂಚದಲ್ಲಿಯೇ ನಮ್ಮಲ್ಲಿ ಇರುವಷ್ಟು ಪ್ರತಿಭೆಗಳು ಎಲ್ಲಿಯೂ ಇಲ್ಲ ಎಂದು ಅನೇಕರು ಒಪ್ಪಿಕೊಂಡಿದ್ದಾರೆ. ನಮ್ಮನ್ನು ಇಡೀ ಪ್ರಪಂಚವೇ ನೋಡುತ್ತಿರುವ ಹೊತ್ತಿನಲ್ಲಿ ನಮ್ಮ ಶಿಕ್ಷಣದ ಗುಣಮಟ್ಟವನ್ನು ನಾವು ಕಾಪಾಡಬೇಕಿದೆ" ಎಂದು ಹೇಳಿದರು.

ಮೊಟ್ಟೆ ಹೊಡೆದಿದ್ದು ಸರಿಯಲ್ಲ

ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತದ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಡಿ.ಕೆ ಶಿವಕುಮಾರ್, "ನಾವೂ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ಮಾಡಿದ್ದೇವೆ. ಮಂಗಳವಾರದಂದು ಕಾಂಗ್ರೆಸ್ ಕಚೇರಿ ಬಳಿ ಮೊಟ್ಟೆ ಹೊಡೆದಿದ್ದನ್ನು ಸರಿ ಎಂದು ಹೇಳುವುದಿಲ್ಲ. ಕಾನೂನಿನ ಪ್ರಕಾರ ಯಾವ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಮ್ಮ ಗೃಹಸಚಿವರು ಈಗಾಗಲೇ ತಿಳಿಸಿದ್ದಾರೆ. ಬಿಜೆಪಿಯವರು ಹಿಂದೆ ಏನೇನು ಮಾಡಿದ್ದರು ಎಂದು ಅವರೂ ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಲಾಠಿ, ಮಚ್ಚು, ರೈಫಲ್ ಗಳು ಸಿಕ್ಕಿದ್ದವು. ಪೊನ್ನಂಪೇಟೆಯ ಶಾಲೆಯ ಆವರಣದಲ್ಲಿ ರೈಫಲ್ ತರಬೇತಿ ನೀಡಿದ್ದರು. ನಿಮ್ಮದೂ ಇತಿಹಾಸಗಳಿವೆ" ಎಂದರು.

Dailyhunt
Disclaimer: This content has not been generated, created or edited by Dailyhunt. Publisher: Pratidhvani