Dailyhunt
ಅಧಿಕಾರದಲ್ಲಿರುವವರ ಮನೆ ಬಾಗಿಲಿಗೆ ನಾನು ಯಾವತ್ತೂ ಹೋಗಿಲ್ಲ : ಸಿದ್ದರಾಮಯ್ಯ

ಅಧಿಕಾರದಲ್ಲಿರುವವರ ಮನೆ ಬಾಗಿಲಿಗೆ ನಾನು ಯಾವತ್ತೂ ಹೋಗಿಲ್ಲ : ಸಿದ್ದರಾಮಯ್ಯ

Saaksha TV 4 years ago

ಅಧಿಕಾರದಲ್ಲಿರುವವರ ಮನೆ ಬಾಗಿಲಿಗೆ ನಾನು ಯಾವತ್ತೂ ಹೋಗಿಲ್ಲ : ಸಿದ್ದರಾಮಯ್ಯ Siddaramaiah saaksha tv

ಹುಬ್ಬಳ್ಳಿ : ಅಧಿಕಾರದಲ್ಲಿರುವವರ ಮನೆ ಬಾಗಿಲಿಗೆ ನಾನು ಯಾವತ್ತೂ ಹೋಗಿಲ್ಲ. ನಾನು ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದು ಅಪ್ಪಟ ಸುಳ್ಳು.

ಯಾರಾದರೂ ಅದನ್ನು ಪ್ರೂವ್ ಮಾಡಿದರೇ ನಾನು ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಸವಾಲ್ ಹಾಕಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಆರ್ ಎಸ್ ಎಸ್ ನಿಂದ ಬಂದವರು.

ನಾವು ಅವರು ತದ್ವಿರುದ್ಧ, ಅವರನ್ನು ಭೇಟಿಯಾಗಿದ್ದು ಸುಳ್ಳು ಎಂದು ಹೇಳುವ ಮೂಲಕ ಹೆಚ್ ಡಿಕೆಗೆ ಟಾಂಗ್ ನೀಡಿದರು.

ನಾನು ಯಾವತ್ತೂ ಅಧಿಕಾರದಲ್ಲಿರುವವರ ಮನೆ ಬಾಗಿಲಿಗೆ ಹೋಗಿಲ್ಲ. ಅದು ನನ್ನ ಪ್ರಿನ್ಸಿಪಲ್, ಹೀಗಾಗಿ ನಾನು ಬಿಎಸ್ ವೈ ಅವರನ್ನು ಭೇಟಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತ 101ಕ್ಕೆ ಸ್ಥಾನಕ್ಕೆ ಕುಸಿದಿರುವ ಬಗ್ಗೆ ಮಾತನಾಡಿ, ಇದು ಪ್ರಧಾನಿ ಮೋದಿಯವರ ಕೊಡುಗೆ.

ನಾನು ದೇಶ ಉದ್ದಾರ, ಸ್ವರ್ಗ, ಅಚ್ಚೇ ದಿನ್ ಮಾಡುತ್ತೇನೆ ಎಂದು ಮೋದಿ ಹೇಳಿದ್ದರು. ಈಗ ಜನರು ಹಸಿವಿನಿಂದ ಬಳಲುವಂತೆ ಮಾಡಿದ್ದಾರೆ ಎಂದು ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Mahesh M Dhandu :
ಕಂಟೆಂಟ್ ಎಡಿಟರ್

Dailyhunt
Disclaimer: This content has not been generated, created or edited by Dailyhunt. Publisher: Saaksha TV