Saturday, 23 Jan, 5.56 pm Saaksha TV

ರಾಜ್ಯ
ಅಕ್ರಮ ಗಣಿಗಾರಿಕೆ, ಅಧಿಕಾರಿಗಳ ನಡುವೆ ಅಕ್ರಮ ಸಂಬಂಧ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬಾಂಬ್..!

ಹುಬ್ಬಳ್ಳಿ: ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಫೋಟ ಅತ್ಯಂತ ಘೋರವಾದದ್ದು, ಗಂಭೀರವಾದದ್ದು. ಅಕ್ರಮ ಗಣಿಗಾರಿಕೆ ಹಾಗೂ ಅಧಿಕಾರಿಗಳ ನಡುವೆ ಅಕ್ರಮ ಸಂಬಂಧ ಇದೆ ಎನ್ನುವ ಮೂಲಕ ಕೇಂದ್ರ ಕೇಂದ್ರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಪ್ರಹ್ಲಾದ್ ಜೋಶಿ ಹೊಸ ಬಾಂಬ್ ಸಿಡಿಸಿದ್ದಾರೆ.

ಪಂಡಿತ್ ದೈವಜ್ಞ ಪ್ರಧಾನ ತಾಂತ್ರಿಕ್ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ , ತಾಂಬೂಲಪ್ರಶ್ನೆ , ಜಾತಕ ವಿಶ್ಲೇಷಣೆ , ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) call/WhatsApp 8548998564

ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ, ಅಕ್ರಮ ಗಣಿಗಾಗಾರಿಕೆ ಅಧಿಕಾರಿಗಳ ಕುಮ್ಮಕ್ಕಿದೆ. ಹೀಗಾಗಿಯೇ ಇಂತಹ ಘಟನೆಗಳು ನಡೆಯುತ್ತಿವೆ. ಬಹಳ ದೊಡ್ಡ ಪ್ರಮಾಣದಲ್ಲಿ ಅಕ್ರಮ ನಡೆಯುತ್ತಿದೆ. ಶಿವಮೊಗ್ಗದಲ್ಲಿ ನಡೆದ ಸ್ಫೋಟದ ಹಿನ್ನೆಲೆಯಲ್ಲಿ ಕೇವಲ ಅಲ್ಲಿರುವ ಅಧಿಕಾರಿಗಳ ಮೇಲೆ ಮಾತ್ರವಲ್ಲ, ರಾಜ್ಯದಲ್ಲಿ ಎಲ್ಲೆಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆಯೋ ಅವರ ಮೇಲೆ ಕ್ರಿಮಿನಲ್ ಕೇಸ್ ಹಾಕಬೇಕು ಎಂದು ಆಗ್ರಹಿಸಿದ್ದಾರೆ.


ಶಿವಮೊಗ್ಗದಲ್ಲಿ ನಡೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ರಾಜ್ಯಾದ್ಯಂತ ಎಲ್ಲೆಲ್ಲಿ ಗಣಿಗಾರಿಕೆ ನಡೆಯುತ್ತಿದೆ ಅದರ ಬಗ್ಗೆ ರಾಜ್ಯ ಸರ್ಕಾರ ಗಂಬೀರವಾಗಿ ತನಿಖೆಯನ್ನು ಮಾಡಬೇಕು. ಯಾರು ಅಕ್ರಮ ಗಣಿಗಾರಿಕೆಯಲ್ಲಿತೊಡಗಿದ್ದಾರೋ ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದರು.
ಭೂಕಂಪ ಆಗಿದ್ದಕ್ಕೆ ಸ್ಫೋಟ ಆಗಿದೆ ಎಂದು ಕೆಲವರು ವಿಚಿತ್ರ ವಾದ ಮಾಡ್ತಿದಾರೆ. ಅಷ್ಟೊಂದು ಪ್ರಮಾಣದ ಸ್ಫೋಟಕ ವಸ್ತುಗಳನ್ನು ಶೇಖರಣೆ ಮಾಡಿದ್ದು ಯಾಕೆ? ಅದು ಪರವಾನಗಿ ಇದೆಯೇ? ಇದೆಲ್ಲದರ ಬಗ್ಗೆ ತನಿಖೆ ಮಾಡಲು ಗಣಿ ಸಚಿವ ಮುರಗೇಶ ನಿರಾಣಿಗೆ ಸೂಚನೆ ನೀಡಿದ್ದೇನೆ. ಇದು ಭಾರತ ಸರ್ಕಾರದ ವ್ಯಾಪ್ತಿಯಲ್ಲಿ ಬರುವುದಿಲ್ಲ, ನಮಗೆ ಮೇಜರ್ ಮಿನರಲ್ಸ್ ಬರುತ್ತದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಕೂಡ ಇದರ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ.. ? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಶಿವಮೊಗ್ಗ ಘಟನೆ ನಡೆದ ಬಳಿಕ ಧಾರವಾಡ ಜಿಲ್ಲೆಯಲ್ಲಿ ಜೆಲಿಟಿನ್ ಕಡ್ಡಿ ವಶ ಪಡೆದು ಎಚ್ಚೆತ್ತುಕೊಂಡಿದ್ದಾರೆ. ಇಷ್ಟು ದಿನ ಏನು ಮಾಡ್ತಾ ಇದ್ರು? ಅಧಿಕಾರಿಗಳ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Kariyappa N
ಸೀನಿಯರ್ ಕಂಟೆಂಟ್ ಎಡಿಟರ್

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Saaksha TV
Top