Tuesday, 14 Sep, 1.23 pm Saaksha TV

ರಾಜ್ಯ
ಬಿಎಂಟಿಸಿ ಪ್ರಯಾಣಿಕರಿಗೆ ಸಿಹಿ ಸುದ್ದಿ ಕೊಟ್ಟ ರಾಮುಲು

ಬಿಎಂಟಿಸಿ ಪ್ರಯಾಣಿಕರಿಗೆ ಸಿಹಿ ಸುದ್ದಿ ಕೊಟ್ಟ ರಾಮುಲು

ಬೆಂಗಳೂರು : ದೇಶದಲ್ಲಿ ತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್ ಪ್ರಯಾಣ ದರವನ್ನು ಹೆಚ್ಚಿಸಲಾಗುವುದು ಎಂದು ಹೇಳಲಾಗುತ್ತಿತ್ತು.

ಇದೀಗ ಈ ಬಗ್ಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದು, ಸಿಲಿಕಾನ್ ಸಿಟಿ ಮಂದಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದ ಬಿಎಂಟಿಸಿ ಆರ್ಥಿಕ ಸಂಕಷ್ಟದಲ್ಲಿದೆ.

ಹೀಗಾಗಿ ಪ್ರಯಾಣ ದರ ಏರಿಕೆಗೆ ಬಿಎಂಟಿಸಿ ಸರ್ಕಾರದ ಮುಂದೆ ಪ್ರಸ್ತಾವನೆಯನ್ನು ಇಟ್ಟಿತ್ತು.

ಆದರೆ ಸಿಎಂ ಬಸವರಾಜ ಬೊಮ್ಮಾಯಿ ದರ ಹೆಚ್ಚಳ ಬೇಡ ಎಂದು ಹೇಳಿದ್ದಾರೆ. ಹೀಗಾಗಿ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಅಂದಹಾಗೆ ಕಳೆದ ಕೆಲ ದಿನಗಳಿಂದ ದೇಶದಾದ್ಯಂತ ಇಂಧನ ಬೆಲೆ ಏರಿಕೆಯಾಗುತ್ತಲೇ ಇದೆ.

ಇದಲ್ಲದೇ ಕೊರೊನಾ ಸಂಕಷ್ಟದಿಂದಾಗಿ ಸಾರಿಗೆ ಇಲಾಖೆ ನಷ್ಟದಲ್ಲಿದ್ದು, ಇದನ್ನು ಸರಿದೂಗಿಸಲು ಬಸ್ ಪ್ರಯಾಣದ ದರ ಹೆಚ್ಚು ಮಾಡಲು ಸಾಧ್ಯತೆಗಳಿವೆ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ನಡೆಯುತ್ತಿತ್ತು. ಈ ಬಗ್ಗೆ ಇದೀಗ ಸಾರಿಗೆ ಸಚಿವರು ಸ್ಪಷ್ಟನೆ ನೀಡಿದ್ದಾರೆ.

Mahesh M Dhandu :
ಕಂಟೆಂಟ್ ಎಡಿಟರ್

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Saaksha TV
Top