Dailyhunt Logo
  • Light mode
    Follow system
    Dark mode
    • Play Story
    • App Story
ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

Saaksha TV 1 week ago

ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ನೇರ ಕಾರಣ ಎಂದು ಆರೋಪಿಸಿದ್ದಾರೆ.

ತುಮಕೂರಿನಲ್ಲಿ ನಡೆದ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆಗಳನ್ನು ನಿರಂತರವಾಗಿ ಏರಿಕೆ ಮಾಡುತ್ತಿದೆ ಎಂದು ಟೀಕಿಸಿದರು.

ಇದನ್ನು ಅಚ್ಚೆ ದಿನ್ ಎಂದು ಕರೆಯಬೇಕಾ? ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ಇಂಧನ ಮತ್ತು ಗ್ಯಾಸ್ ದರ ಎಷ್ಟಿತ್ತು, ಈಗ ಎಷ್ಟಾಗಿದೆ ಎಂಬುದನ್ನು ಜನರು ನೋಡುತ್ತಿದ್ದಾರೆ ಎಂದು ಪ್ರಶ್ನಿಸಿದರು.ಅವರು, ಇಂದು ದೇಶದಲ್ಲಿ ಸಾಮಾನ್ಯ ಜನರು ಬೆಲೆ ಏರಿಕೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಪರಿಸ್ಥಿತಿಗೆ ಪ್ರಧಾನಿ ಮೋದಿ ಸರ್ಕಾರದ ಆರ್ಥಿಕ ನೀತಿಗಳೇ ನೇರ ಕಾರಣ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಅವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಮತ್ತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಾಕ್ಸಮರವನ್ನು ತೀವ್ರಗೊಳಿಸಿದೆ.

Dailyhunt
Disclaimer: This content has not been generated, created or edited by Dailyhunt. Publisher: Saaksha TV