Dailyhunt Logo
  • Light mode
    Follow system
    Dark mode
    • Play Story
    • App Story
ಜನರ ಹಣದಲ್ಲಿ ಕಾಂಗ್ರೆಸ್ ಮೋಜು-ಮಸ್ತಿ: ನಿಖಿಲ್ ಕುಮಾರಸ್ವಾಮಿ ಟೀಕೆ

ಜನರ ಹಣದಲ್ಲಿ ಕಾಂಗ್ರೆಸ್ ಮೋಜು-ಮಸ್ತಿ: ನಿಖಿಲ್ ಕುಮಾರಸ್ವಾಮಿ ಟೀಕೆ

Saaksha TV 1 week ago

ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.

ಸಾಧನಾ ಸಮಾವೇಶ ಕುರಿತು ಮಾತನಾಡಿದ ಅವರು, ಯಾವ ಪುರುಷಾರ್ಥಕ್ಕೆ ಈ ಸಮಾವೇಶ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಜನರ ಹಣದಲ್ಲಿ ಮೋಜು-ಮಸ್ತಿ ಮಾಡಲು ಕಾಂಗ್ರೆಸ್ ಸರ್ಕಾರ ಈ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಜನರೇ ಈಗ ವಿರೋಧ ಪಕ್ಷಗಳಿಗಿಂತ ಹೆಚ್ಚು ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ ಎಂದು ಹೇಳಿದ ನಿಖಿಲ್, ಹಲವು ಇಲಾಖೆಗಳ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಸಾರಿಗೆ ಇಲಾಖೆ ಹೇಗೆ ಕೆಲಸ ಮಾಡುತ್ತಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ. ನೌಕರರ ಅರಿಯರ್ಸ್ ಇನ್ನೂ ಬಾಕಿಯೇ ಉಳಿದಿವೆ. ಸರ್ಕಾರ ಸಂಧಾನ ಸಭೆ ನಡೆಸಿದರೂ ಯಾವುದೇ ಸ್ಪಷ್ಟ ಫಲಿತಾಂಶ ಸಿಕ್ಕಿಲ್ಲ ಎಂದು ಆರೋಪಿಸಿದರು.

ನಿಖಿಲ್ ಕುಮಾರಸ್ವಾಮಿ ಅವರ ಈ ಹೇಳಿಕೆ ಸರ್ಕಾರದ ಸಾಧನಾ ಸಮಾವೇಶದ ಬಗ್ಗೆ ರಾಜಕೀಯ ವಾಗ್ವಾದವನ್ನು ಮತ್ತಷ್ಟು ತೀವ್ರಗೊಳಿಸಿದೆ.

Dailyhunt
Disclaimer: This content has not been generated, created or edited by Dailyhunt. Publisher: Saaksha TV