Dailyhunt
ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ

ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ

Saaksha TV 4 years ago

ಗಣೇಶ ಚತುರ್ಥಿ ಪ್ರಯುಕ್ತ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ

ಬೆಂಗಳೂರು : ಮುಂಬರುವ ಗೌರಿ ಹಾಗೂ ಗಣೇಶ ಚತುರ್ಥಿಯ ಪ್ರಯುಕ್ತ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ವಿಶೇಷ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ "ದ ಸೋಕ್ ಮಾರ್ಕೇಟ್" ನ್ನು ಆಯೋಜಿಸಲಾಗಿದೆ.

ಇಂದಿನಿಂದ ಸೆಪ್ಟೆಂಬರ್ 12 ರ ವರೆಗೆ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಈ ಮೇಳೆ ನಡೆಯಲಿದೆ.

ಈ ಮೇಳದಲ್ಲಿ ಕೋವಿಡ್ ಹರಡದಂತೆ ಎಲ್ಲಾ ರೀತಿಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರವೇಶ ಉಚಿತವಾಗಿದೆ. ಮುಂಬರುವ ಹಬ್ಬಗಳಿಗೆ ಬೇಕಾಗಿರುವ ಎಲ್ಲಾ ರೀತಿಯ ಸಾಮಗ್ರಿಗಳನ್ನು ಇಲ್ಲಿ ಕೊಳ್ಳಬಹುದಾಗಿದೆ. ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ.

ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಅದರಲ್ಲೂ ಗಣೇಶನ ಮೂರ್ತಿಗಳು ಈ ಬಾರಿಯ ಪ್ರಮುಖ ಆಕರ್ಷಣೆಯಾಗಿರಲಿವೆ. ಇದರ ಜೊತೆಯಲ್ಲಿಯೇ, ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್ ಲೂಮ್ ಸ್ಯಾರಿಯನ್ನು ಸೆಲೆಕ್ಟ್ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ.

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ.

Mahesh M Dhandu :
ಕಂಟೆಂಟ್ ಎಡಿಟರ್

Dailyhunt
Disclaimer: This content has not been generated, created or edited by Dailyhunt. Publisher: Saaksha TV