Sunday, 22 Nov, 1.52 pm Saaksha TV

ರಾಜಕೀಯ
ಮಸ್ಕಿ, ಬಸವಕಲ್ಯಾಣ ಬೈ ಎಲೆಕ್ಷನ್ : ಸ್ಪರ್ಧೆಯಿಂದ ಹಿಂದೆ ಸರಿದ ಜೆಡಿಎಸ್

ಮಸ್ಕಿ, ಬಸವಕಲ್ಯಾಣ ಬೈ ಎಲೆಕ್ಷನ್ : ಸ್ಪರ್ಧೆಯಿಂದ ಹಿಂದೆ ಸರಿದ ಜೆಡಿಎಸ್

ಬೆಂಗಳೂರು : ಮುಂಬರುವ ಮಸ್ಕಿ, ಬಸವಕಲ್ಯಾಣ ಉಪ ಚುನಾವಣೆಗೆ ಬಿಜೆಪಿ,ಕಾಂಗ್ರೆಸ್ ಪಕ್ಷಗಳು ಈಗಾಗಲೇ ತಯಾರಿ ಆರಂಭಿಸಿವೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಈಗಾಗಲೇ ಮಸ್ಕಿಯಲ್ಲಿ ಗೆಲುವಿಗಾಗಿ ರಣತಂತ್ರ ರೂಪಿಸುತ್ತಿದ್ದಾರೆ.

ಇತ್ತ ಕಾಂಗ್ರೆಸ್ ಪಕ್ಷ ಕೂಡ ತನ್ನದೇಯಾದ ತಂತ್ರವನ್ನು ಪ್ರಯೋಗಿಸುತ್ತಿದೆ. ಆದ್ರೆ ಜೆಡಿಎಸ್ ಮಾತ್ರ ಚುನಾವಣಾ ಅಖಾಡದಿಂದ ಹಿಂದೆ ಸರಿಯುವುದಾಗಿ ತಿಳಿಸಿದೆ.

ಎರಡು ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

ಕೆಪಿಸಿಸಿ ಕಚೇರಿಗೆ ಬನ್ನಿ, ಸಂವಿಧಾನ ಪಾಠ ಕಲಿಸ್ತೇವೆ: ಸಿ.ಟಿ ರವಿಗೆ ಕಾಂಗ್ರೆಸ್ ಪಂಥಾಹ್ವಾನ..!

ನಗರದ ದಾಸರಹಳ್ಳಿಯಲ್ಲಿ ಜೆಡಿಎಸ್ ಪಕ್ಷ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸ್ಕಿ ಮತ್ತು ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ.

ತಮ್ಮ ಪಕ್ಷದಿಂದ ಯಾವುದೇ ಅಭ್ಯರ್ಥಿಗಳು ಚುನಾವಣೆ ನಿಲ್ಲುವುದಿಲ್ಲ ಎಂಬುದಾಗಿ ಘೋಷಣೆ ಮಾಡಿದ್ದಾರೆ.

ಉಪಚುನಾವಣೆಯಲ್ಲಿ ಬಿಜೆಪಿಯ ಗೆಲ್ಲುವ ವಿಧಾನವೇ ಬೇರೆಯದ್ದಾಗಿದೆ. ಇಂತಹ ಸಮಯದಲ್ಲಿ ನಾವು ಚುನಾವಣೆ ಗೆಲ್ಲುವುದು ಕಷ್ಟ.

ಹೀಗಾಗಿ ಜಿಲ್ಲೆಯ ಪಕ್ಷದ ಮುಖಂಡರ ಜೊತೆ ಚರ್ಚೆ ನಡೆಸಿ ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Mahesh M Dhandu :
ಕಂಟೆಂಟ್ ಎಡಿಟರ್

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Saaksha TV
Top