Dailyhunt Logo
  • Light mode
    Follow system
    Dark mode
    • Play Story
    • App Story
'ಮೆಲೋಡಿ ಗಿಫ್ಟ್' ವಿವಾದ: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

'ಮೆಲೋಡಿ ಗಿಫ್ಟ್' ವಿವಾದ: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

Saaksha TV 1 day ago

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಇಟಲಿ ಪ್ರಧಾನಿಗೆ ಚಾಕೊಲೇಟ್ ಉಡುಗೊರೆ ನೀಡಿದ ವೈರಲ್ ವಿಡಿಯೋವನ್ನು ಟೀಕಿಸಿದ್ದಾರೆ.

ಇತ್ತೀಚೆಗೆ ಪ್ರಧಾನಿ ಮೋದಿ ಇಟಲಿ ಪ್ರಧಾನಿಗೆ 'ಮೆಲೋಡಿ' ಚಾಕೊಲೇಟ್ ಗಿಫ್ಟ್ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು.

ಈ ಹಿನ್ನೆಲೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ದೇಶದ ಆರ್ಥಿಕ ಪರಿಸ್ಥಿತಿ ಮತ್ತು ಜನರ ಸಂಕಷ್ಟವನ್ನು ಉಲ್ಲೇಖಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಒಂದೆಡೆ ರೈತರು, ಯುವಕರು, ಮಹಿಳೆಯರು, ಕಾರ್ಮಿಕರು ಹಾಗೂ ಸಣ್ಣ ವ್ಯಾಪಾರಿಗಳು ಸಂಕಷ್ಟದಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ಇನ್ನೊಂದೆಡೆ ಪ್ರಧಾನಿ ಮೋದಿ ನಗುತ್ತಾ ರೀಲ್ಸ್ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.
ಇದಕ್ಕೆ BJP ನಾಯಕರು ಚಪ್ಪಾಳೆ ತಟ್ಟುತ್ತಿದ್ದಾರೆ. ಇದು ನಾಯಕತ್ವವಲ್ಲ, ನಾಟಕ ಎಂದು ರಾಹುಲ್ ಗಾಂಧಿ ಕಿಡಿಕಾರಿದರು.

ಈ ಹೇಳಿಕೆ ಬಳಿಕ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಆರಂಭವಾಗಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಮತ್ತೆ ವಾಕ್ಸಮರ ತೀವ್ರಗೊಂಡಿದೆ.

Dailyhunt
Disclaimer: This content has not been generated, created or edited by Dailyhunt. Publisher: Saaksha TV