Dailyhunt
ಮುಂದಿನ 2 ದಿನ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ..!

ಮುಂದಿನ 2 ದಿನ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ..!

Saaksha TV 4 years ago

ನವದೆಹಲಿ : ಕೆಲ ದಿನಗಳಿಂದ ರಾಜ್ಯದಲ್ಲಿ ಬಿಟ್ಟು ಬಿಟ್ಟು ಮಳೆಯಾಗ್ತಲೇ ಇದೆ..

ಈ ನಡುವೆ ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ.

ಇಂದು ಮತ್ತು ನಾಳೆ ( ಸೆಪ್ಟೆಂಬರ್ 7 - ಸೆಪ್ಟೆಂಬರ್ 8) ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಅಧಿಕ ಮಳೆಯಾಗುವುದಾಗಿ ತಿಳಿಸಿದೆ.

ದಕ್ಷಿಣ ಭಾರತದಲ್ಲಿ ಈ ವಾರವಿಡೀ ಗುಡುಗು ಮಿಶ್ರಿತ ಭಾರೀ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

ಈ ಅವಧಿಯಲ್ಲಿ ಅರಬ್ಬೀ ಸಮುದ್ರದಿಂದ ಬೀಸುವ ಆರ್ದ್ರ ಮಾರುತಗಳು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಗೆ ಕಾರಣವಾಗಲಿದೆ ಎನ್ನಲಾಗ್ತಿದೆ.

ದಕ್ಷಿಣ ಭಾರತದಲ್ಲಿ ಮುಂದಿನ 48 ಗಂಟೆ ಅಧಿಕ ಮಳೆ ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಭಾರತದಲ್ಲಿ ವ್ಯಾಪಕ ಮಳೆಯಾಗಲಿದೆ. ಆನಂತರ ಮಳೆ ತೀವ್ರತೆ ಕಡಿಮೆಯಾಗಲಿದೆ.

ಈ ಹವಾಮಾನದ ಕಾರಣವಾಗಿ ಮುಂದಿನ ಎರಡು ದಿನಗಳವರೆಗೆ ಕರ್ನಾಟಕದ ದಕ್ಷಿಣ ಒಳನಾಡು , ಕೇರಳ, ಆಂಧ್ರದ ಕರಾವಳಿ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Namratha Rao
ಕಂಟೆಂಟ್ ಎಡಿಟರ್ -saakshatv.com

Dailyhunt
Disclaimer: This content has not been generated, created or edited by Dailyhunt. Publisher: Saaksha TV