Dailyhunt
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ : ಸೆ.15ರವರೆಗೆ ಅಭಿಯಾನ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ : ಸೆ.15ರವರೆಗೆ ಅಭಿಯಾನ

Saaksha TV 4 years ago

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ : ಸೆ.15ರವರೆಗೆ ಅಭಿಯಾನ

ಕೊಡಗು : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಒತ್ತಾಯಿಸಿ ಸೆಪ್ಟೆಂಬರ್ 15ರ ವರೆಗೆ ಎಲ್ಲ ಜಿಲ್ಲೆಗಳಲ್ಲಿ ಅಭಿಯಾನ ನಡೆಯಲಿದೆ. ಅಷ್ಟರಲ್ಲಿ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವ ನಂಬಿಕೆ ಇದೆ.

ಬೇಡಿಕೆ ಈಡೇರದಿದ್ದರೆ 30ರ ಬಳಿಕ ಧರಣಿ ಸತ್ಯಾಗ್ರಹ ಮತ್ತೆ ನಡೆಯಲಿದೆ ಎಂದು ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀನಿ ಎಚ್ಚರಿಕೆ ನೀಡಿದ್ದಾರೆ.

ಕೊಡಗಿನ ಕೋಡ್ಲಿಪೇಟೆಯ ಕಲ್ಲು ಮಠದಲ್ಲಿ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಪ್ರತಿಜ್ಞಾ ಪಂಚಾಯತ್ ಅಭಿಯಾನಕ್ಕೆ ಚಾಲನೆ ನೀಡಿದರು.

ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಸೆಪ್ಟೆಂಬರ್ 15ರ ವರೆಗೆ ಎಲ್ಲ ಜಿಲ್ಲೆಗಳಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಅಭಿಯಾನ ನಡೆಯಲಿದೆ. ಅಷ್ಟರಲ್ಲಿ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವ ನಂಬಿಕೆ ಇದೆ. ಬೇಡಿಕೆ ಈಡೇರದಿದ್ದರೆ 30ರ ಬಳಿಕ ಧರಣಿ ಸತ್ಯಾಗ್ರಹ ಮತ್ತೆ ನಡೆಯಲಿದೆ. ಅಕ್ಟೋಬರ್ 1ರಂದು ಮಾಜಿ ಸಿಎಂ ಜೆ.ಎಚ್.ಪಟೇಲ್ ಅವರ ಜಯಂತಿ ಇರುವುದರಿಂದ ಅದೇ ದಿನ ಜಯಂತಿ ಆಚರಿಸಿ ಅದೇ ವೇದಿಕೆಯಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ ಎಂದು ತಿಳಿಸಿದರು.

ಇನ್ನು ಕೊಡಗಿನ ಪ್ರತಿಜ್ಞಾ ಪಂಚಾಯತ್ ಅಭಿಯಾನದಲ್ಲಿ ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್ ಸೇರಿದಂತೆ ಅನೇಕ ಪಂಚಮಸಾಲಿ ಮುಖಂಡರು ಅಭಿಯಾನದಲ್ಲಿ ಭಾಗಿಯಾಗಿಯಾಗಿದ್ದರು.

Mahesh M Dhandu :
ಕಂಟೆಂಟ್ ಎಡಿಟರ್

Dailyhunt
Disclaimer: This content has not been generated, created or edited by Dailyhunt. Publisher: Saaksha TV