Dailyhunt
ಸೆ.17 ರಿಂದ ಕೊಡಗಿನಲ್ಲಿ ಶಾಲಾ-ಕಾಲೇಜು ಆರಂಭ

ಸೆ.17 ರಿಂದ ಕೊಡಗಿನಲ್ಲಿ ಶಾಲಾ-ಕಾಲೇಜು ಆರಂಭ

Saaksha TV 4 years ago

ಸೆ.17 ರಿಂದ ಕೊಡಗಿನಲ್ಲಿ ಶಾಲಾ-ಕಾಲೇಜು ಆರಂಭ Kodagu saaksha tv

ಮಡಿಕೇರಿ : ಶುಕ್ರವಾರದಿಂದ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪಾಸಿಟಿವಿಟಿ ದರ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 17 ರಿಂದ ಶಾಲಾ ಕಾಲೇಜು ಆರಂಭಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಕಡಿಮೆಯಾಗುತ್ತಿದ್ದಂತೆ ಶಾಲೆ ಆರಂಭದ ಕುರಿತು ಜಿಲ್ಲಾಧಿಕಾರಿಗಳು ಡಿಡಿಪಿಐ ಮತ್ತು ಡಿಡಿಪಿಯು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸೆಪ್ಟಂಬರ್ 17ರಿಂದ ಶಾಲಾ-ಕಾಲೇಜು ಆರಂಭಿಸಲು ನಿರ್ಧರಿಸಿದ್ದಾರೆ.

ಸದ್ಯ ಕೊಡಗಿನಲ್ಲಿ ಕೊರೊನಾ ಸೋಂಕಿನ ಪಾಸಿಟಿವಿಟಿ ದರ ಶೇಕಡಾ 2ಕ್ಕಿಂತ ಕಡಿಮೆ ಇದೆ. ಜಿಲ್ಲೆಯಲ್ಲಿ 494 ಸಕ್ರಿಯ ಪ್ರಕರಣಗಳಿವೆ.

Mahesh M Dhandu :
ಕಂಟೆಂಟ್ ಎಡಿಟರ್

Dailyhunt
Disclaimer: This content has not been generated, created or edited by Dailyhunt. Publisher: Saaksha TV