ಮಂಗಳೂರು: ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು, ಸಂಪುಟದಿಂದ ಕೈಬಿಡೋದು ಮುಖ್ಯಮಂತ್ರಿಗಳ ಪರಾಮಾಧಿಕಾರ. ಆದರೆ, ಬಿಜೆಪಿ ಶಾಸಕರ ನಡುವೆ ಯಾವುದೇ ಗೊಂದಲಗಳಿಲ್ಲ. ಶಾಸಕರು ಸಚಿವ ಸ್ಥಾನಕ್ಕೆ ಅಪೇಕ್ಷೆ ಪಡೋದು ತಪ್ಪಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಕಟೀಲ್, ರಾಜಕಾರಣದಲ್ಲಿ ಅಪೇಕ್ಷೆ ಮತ್ತು ಗುರಿ ಇರಬೇಕು. ಸಚಿವ ಸ್ಥಾನ ಕೊಡೋದು ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ನಾಯಕರಿಗೆ ಬಿಟ್ಟಿದ್ದು ಎಂದರು.
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ರೀತಿಯ ಚರ್ಚೆಯಾಗಿಲ್ಲ. ನಾಯಕತ್ವ ಬದಲಾವಣೆ ಬಗ್ಗೆ ಯಾರೂ ಪ್ರಶ್ನೆ ಎತ್ತಿಲ್ಲ. ಕಳೆದ 4 ತಿಂಗಳಿನಿಂದ ನಾಯಕತ್ವದ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸುತ್ತಿದ್ದೇನೆ. ಈ ರೀತಿಯ ಯಾವುದೇ ರೀತಿಯ ಚರ್ಚೆಗಳು ನಡೆದಿಲ್ಲ ಎಂದು ನಳಿನ್‍ಕುಮಾರ್ ಕಟೀಲ್ ಸ್ಪಷ್ಟಪಡಿಸಿದರು.
ಎಲ್ಲರಿಗೂ ಮಂತ್ರಿಯಾಗುವ ಅಪೇಕ್ಷೆ ಇದೆ. ಇದರ ಬಗ್ಗೆ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ನಿರ್ಧಾರ ತಗೆದುಕೊಳ್ಳುತ್ತದೆ. ಸಚಿವ ಸ್ಥಾನಕ್ಕೆ ಅಪೇಕ್ಷೆ ಮಾಡೋದು ತಪ್ಪಲ್ಲ ಎಂದು ಮಂಗಳೂರಿನಲ್ಲಿ ಡಿಸಿಎಂ ಅಶ್ವತ್ಥನಾರಾಯಣ್ ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
Kariyappa N
ಸೀನಿಯರ್ ಕಂಟೆಂಟ್ ಎಡಿಟರ್

