Monday, 21 Sep, 9.58 am Saaksha TV

ರಾಜ್ಯ
ಉಡುಪಿ ಕ್ಷೀಣಿಸಿದ ಮಳೆರಾಯನ ಅರ್ಭಟ - ಮನೆಗಳಿಗೆ ಹಿಂತಿರುಗುತ್ತಿರುವ ಜನರು

ಉಡುಪಿ ಕ್ಷೀಣಿಸಿದ ಮಳೆರಾಯನ ಅರ್ಭಟ - ಮನೆಗಳಿಗೆ ಹಿಂತಿರುಗುತ್ತಿರುವ ಜನರು

ಉಡುಪಿ, ಸೆಪ್ಟೆಂಬರ್‌21: ಉಡುಪಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರವಾಗಿ ಸುರಿದ ಮಳೆ ಇಂದು ಕ್ಷೀಣಿಸಿದೆ. ನಿನ್ನೆ ರಾತ್ರಿಯಿಂದಲೇ ಮಳೆಯ ಆರ್ಭಟ ಕಡಿಮೆ ಆಗಿದ್ದು, ಮಳೆರಾಯ ಬಿಡುವು ಪಡೆದು ಕೊಂಡಿದ್ದಾನೆ.
ಕಳೆದೆರಡು ದಿನಗಳಿಂದ ಬಿಡುವಿಲ್ಲದೆ ಸುರಿದ ಮಳೆಯ ಪರಿಣಾಮ ಉಡುಪಿ, ಬ್ರಹ್ಮಾವರ ಹಾಗೂ ಕಾಪು ತಾಲ್ಲೂಕಿನ ಬಹುತೇಕ ಗ್ರಾಮಗಳು ಜಲಾವೃತವಾಗಿದ್ದವು. ಮನೆಗಳಿಂದ ಜನರು ಹೊರಗೆ ಬರಲಾಗದೆ ಜಲದಿಗ್ಬಂಧನದಲ್ಲಿ ಸಿಲುಕಿದ್ದರು. ಉಡುಪಿಯ ಕೃಷ್ಣಮಠ ಹಾಗೂ ಹಿರಿಯಡ್ಕ ಸಮೀಪದ ಪುತ್ತಿಗೆ ಮಠ ಜಲಾವೃತಗೊಂಡಿತ್ತು.‌ ಎನ್‌ಡಿಆರ್‌ಎಫ್‌ ತಂಡ ಅಗ್ನಿಶಾಮಕ ದಳದ ಸಿಬ್ಬಂದಿ, ಕೋಸ್ಟ್‌ಗಾರ್ಡ್ ಹಾಗೂ ಸ್ಥಳೀಯರು ದೋಣಿಗಳನ್ನು ಬಳಸಿ ಪ್ರವಾಹಕ್ಕೆ ಸಿಲುಕಿದವರನ್ನು ರಕ್ಷಣೆ ಮಾಡಿದರು. ತಗ್ಗು ಪ್ರದೇಶದಲ್ಲಿದ್ದ ಜನರನ್ನು ಸುರಕ್ಷಿತ ತಾಣಗಳಿಗೆ ಸ್ಥಳಾಂತರಿಸಲಾಗಿತ್ತು. ಇದೀಗ ಮಳೆಯ ಅಬ್ಬರ ಕಡಿಮೆಯಾದ ಪರಿಣಾಮ ಜನರು ಮತ್ತೆ ತಮ್ಮ ಮನೆಗಳಿಗೆ ಹಿಂದಿರುಗುತ್ತಿದ್ದಾರೆ. ಇಂದು ಮತ್ತೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಜಿಲ್ಲೆಯಲ್ಲಿ ಇಂದು, ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನದಿ ಪಾತ್ರದ ಜನರು ಬಹಳ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Saaksha TV
Top