ಬಹಾದೂರ್ಗಢ್ (ಹರಿಯಾಣ) - ಹರಿಯಾಣ ಮತ್ತು ದೆಹಲಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ, ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಪ್ರವೇಶ ಮತ್ತು ಹಿಮಾಂಶು ಎಂಬ ಇಬ್ಬರು ಗೂಂಡಾಗಳು ಇಲ್ಲಿ ಪೊಲೀಸರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಹತರಾಗಿದ್ದಾರೆ. ಇವರಿಬ್ಬರು ಜಿಮ್ (ವ್ಯಾಯಾಮಶಾಲೆ) ಸಂಚಾಲಕರೊಬ್ಬರ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದರು.
ಇವರನ್ನು ಹಿಡಿದುಕೊಟ್ಟವರಿಗೆ ತಲಾ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಹರಿಯಾಣ ಪೊಲೀಸರು ಈ ಹಿಂದೆ ಘೋಷಿಸಿದ್ದರು. ಈ ಎನ್‌ಕೌಂಟರ್‌ನಲ್ಲಿ ದೆಹಲಿ ಪೊಲೀಸರ ಹವಾಲ್ದಾರ್ ಒಬ್ಬರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ರಹಸ್ಯ ಮಾಹಿತಿಯ ಆಧಾರದ ಮೇಲೆ ಪೊಲೀಸರು ಇಬ್ಬರನ್ನೂ ಸುತ್ತುವರಿದು ಶರಣಾಗುವಂತೆ ಸೂಚಿಸಿದರು; ಆದರೆ ಅವರು ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಿದರು. ತದನಂತರ ಪೊಲೀಸರು ಆತ್ಮರಕ್ಷಣೆಗಾಗಿ ನಡೆಸಿದ ಪ್ರತಿದಾಳಿಯಲ್ಲಿ ಇಬ್ಬರೂ ತೀವ್ರವಾಗಿ ಗಾಯಗೊಂಡರು. ಆಸ್ಪತ್ರೆಗೆ ಕರೆದೊಯ್ದ ನಂತರ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

