Dailyhunt Logo
  • Light mode
    Follow system
    Dark mode
    • Play Story
    • App Story
ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ಸಮಾನ ನಾಗರಿಕ ಸಂಹಿತೆ ಜಾರಿಯಾಗುವ ಸಾಧ್ಯತೆ!

ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ಸಮಾನ ನಾಗರಿಕ ಸಂಹಿತೆ ಜಾರಿಯಾಗುವ ಸಾಧ್ಯತೆ!

ಮುಂಬಯಿ - ಮಹಾರಾಷ್ಟ್ರದಲ್ಲಿ ಶೀಘ್ರದಲ್ಲೇ ಸಮಾನ ನಾಗರಿಕ ಸಂಹಿತೆಯನ್ನು (Uniform Civil Code) ಜಾರಿಗೆ ತರುವ ಸಾಧ್ಯತೆಯಿದೆ. ಇದಕ್ಕೆ ಸಂಬಂಧಿಸಿದ ಕರಡು ಸಿದ್ಧವಾಗಿದೆ. ಇದಕ್ಕಾಗಿ ಮುಂದಿನ 2 ವಾರಗಳಲ್ಲಿ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.

ಸಮಿತಿಯ ರಚನೆ, ಅದರ ಕಾರ್ಯವೈಖರಿ ಮತ್ತು ಅಧಿಕಾರ ವ್ಯಾಪ್ತಿಯನ್ನು ಇನ್ನೂ ನಿರ್ಧರಿಸಲಾಗಿಲ್ಲ.

ಕಳೆದ ವಾರ ಮಹಾರಾಷ್ಟ್ರ ಗೃಹ ರಾಜ್ಯ ಸಚಿವ ಯೋಗೇಶ್ ಕದಮ್ ಅವರು ವಿಧಾನಸಭೆಯಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸುವ ಕುರಿತು ಮಾಹಿತಿ ನೀಡಿದ್ದರು. ಅವರು, "ಕಾನೂನಿನ ಕರಡನ್ನು ಸಿದ್ಧಪಡಿಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗುವುದು" ಎಂದು ಹೇಳಿದರು.

Dailyhunt
Disclaimer: This content has not been generated, created or edited by Dailyhunt. Publisher: Sanatan Prabhat Kannada