Wednesday, 16 Sep, 5.50 pm Statenewskannada.tv

Posts
ಡ್ರಗ್ಸ್ ಮಾಫಿಯಾ ಪ್ರಕರಣ : ನಟಿ ಸಂಜನಾಗೆ 3 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಸ್ಯಾಂಡಲ್‌ವುಡ್ ಡ್ರಗ್ಸ್ ನಂಟು ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನವಾಗಿರುವ ನಟಿ ಸಂಜನಾ ಗಲ್ರಾನಿಗೆ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.

ಇಂದು ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನೆಲೆ ಬೆಳಗ್ಗೆ ಮಲ್ಲೇಶ್ವರದ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಭೆ ನಡೆಸಿದ ಬಳಿಕ ನಟಿ ಸಂಜನಾ ಗಲ್ರಾನಿಯನ್ನ 1 ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ಆರೋಪಿಗಳಾದ ವಿರೇನ್ ಖನ್ನಾ ಹಾಗು ರವಿಶಂಕರ್‌ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 33 ನೇ ಸಿಸಿಹೆಚ್ ನ್ಯಾಯಾಲಯದಿಂದ ಆದೇಶ ನೀಡಲಾಯಿತು. ನಟಿ ಸಂಜನಾ ಗ್ರಲಾನಿ ಪರ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಸೆಪ್ಟೆಂಬರ್ 18 ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದ್ದಾರೆ.

READ : https://statenewskannada.tv/drugs-mafia-sanjana-galrani-jail/

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Statenewskannada.tv
Top