Dailyhunt Logo
  • Light mode
    Follow system
    Dark mode
    • Play Story
    • App Story
ಹಿರಿಯ ಕ್ರಿಕೆಟ್ ಪಟು ಎನ್‌ಆರ್‌ಎಚ್ ರಮೇಶ್ ನಿಧನ

ಹಿರಿಯ ಕ್ರಿಕೆಟ್ ಪಟು ಎನ್‌ಆರ್‌ಎಚ್ ರಮೇಶ್ ನಿಧನ

ಸುದ್ದಿದಿನ,ದಾವಣಗೆರೆ: ನಗರದ ಎನ್‌ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ.

ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್‌ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Suddidina