ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.
ವಿಜಯಕುಮಾರ್ ಎ.ಬಿ. ವಹಿಸಿದ್ದರು.
ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ "ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ" ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.
ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.

