Dailyhunt Logo
  • Light mode
    Follow system
    Dark mode
    • Play Story
    • App Story
ಬಲ್ಕಿಷ್ ಬಾನುರಿಗೆ ಅಲ್ಪಸಂಖ್ಯಾತ ಮತ್ತು ಮಹಿಳಾ ಕೋಟಾದಡಿ ಸಚಿವ ಸ್ಥಾನ ನೀಡುವಂತೆ ಸೈಯದ್ ಖಾಲಿದ್ ಅಹ್ಮದ್ ಮನವಿ

ಬಲ್ಕಿಷ್ ಬಾನುರಿಗೆ ಅಲ್ಪಸಂಖ್ಯಾತ ಮತ್ತು ಮಹಿಳಾ ಕೋಟಾದಡಿ ಸಚಿವ ಸ್ಥಾನ ನೀಡುವಂತೆ ಸೈಯದ್ ಖಾಲಿದ್ ಅಹ್ಮದ್ ಮನವಿ

Suddikshana 1 week ago

ದಾವಣಗೆರೆ: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸಂಪುಟದಲ್ಲಿ ಮಹಿಳಾ ಸಚಿವ ಸ್ಥಾನ ಬಾಕಿ ಇದ್ದು, ಈ ಕೋಟಾದಡಿ ವಿಧಾನ ಪರಿಷತ್ ಸದಸ್ಯೆ ಹಾಗೂ ಕಾಂಗ್ರೆಸ್ ಹಿರಿಯ ನಾಯಕಿ ಬಲ್ಕಿಷ್ ಬಾನು ಅವರಿಗೆ ಮಂತ್ರಿ ಸ್ಥಾನ ನೀಡುವಂತೆ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರು ಒತ್ತಾಯಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಲ್ಕಿಶ್ ಬಾನು ಅವರಿಗೆ ಸಚಿವ ಸ್ಥಾನ ನೀಡಿದರೆ ಮಧ್ಯ ಕರ್ನಾಟಕದ ಜಿಲ್ಲೆಗಳಾದ ದಾವಣಗೆರೆ, ಹಾವೇರಿ, ಶಿವಮೊಗ್ಗ, ಬಳ್ಳಾರಿ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಗೊಳಿಸಲು ಸಹಕಾರಿಯಾಗುತ್ತದೆ. ಅಲ್ಪಸಂಖ್ಯಾತರ ಹಾಗೂ ಮಹಿಳಾ ಕೋಟಾದಡಿ ಸಚಿವ ಸ್ಥಾನ ನೀಡಿದಂತೆಯೂ ಆಗುತ್ತದೆ ಎಂದು ತಿಳಿಸಿದ್ದಾರೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ಕಾರ್ಯಕರ್ತೆಯಾಗಿ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಇಂಥ ಹಿರಿಯ ನಾಯಕಿಗೆ ಸಚಿವ ಸ್ಥಾನ ನೀಡುವ ಮೂಲಕ ಗೌರವಿಸಬೇಕು. ಮಾತ್ರವಲ್ಲ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಲ್ಲಿ ಹೆಚ್ಚಿನ ರೀತಿಯಲ್ಲಿ ಅರಿವು ಮೂಡಿಸಲು, ಪರಿಣಾಮಕಾರಿಯಾಗಿ ತಲುಪಿಸಲು ಸಹಕಾರಿಯಾಗುತ್ತದೆ. ಆದ್ದರಿಂದ ಕಾಂಗ್ರೆಸ್ ಪಕ್ಷದ ಹೈಕಮಾಂಡ್, ಸಿಎಂ ಡಿ. ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಲ್ಕಿಷ್ ಬಾನು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಮಹಾನಗರ ಪಾಲಿಕೆ ಚುನಾವಣೆಗಳು ಬರಲಿವೆ. ಮಹಿಳೆಯರ ಮತಗಳೇ ಈ ಚುನಾವಣೆಗಳಲ್ಲಿ ನಿರ್ಣಾಯಕವಾಗಿದ್ದು, ಬಲ್ಕಿಷ್ ಬಾನು ಅವರಿಗೆ ಸಚಿವ ಸ್ಥಾನ ನೀಡಿದರೆ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರೂ ಸೇರಿದಂತೆ ಬೇರೆ ಸಮುದಾಯದ ಮಹಿಳೆಯರ ಮತಗಳು ಕಾಂಗ್ರೆಸ್ ಗೆ ಬರುವಂತೆ ಮಾಡುವಲ್ಲಿ ಅವರು ಶ್ರಮಿಸಲಿದ್ದಾರೆ. ಪಕ್ಷವು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸೈಯದ್ ಖಾಲಿದ್ ಅಹ್ಮದ್ ಅವರು ವಿನಂತಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Suddikshana