Thursday, 21 Jan, 9.30 pm ಸುದ್ದಿಒನ್

ಪ್ರಮುಖ ಸುದ್ದಿ
45 ವರ್ಷ ಮನೆ ಬಿಟ್ಟು ತ್ಯಾಗ ಮಾಡಿದ್ದೇನೆ, ಬಿಜೆಪಿ ನನಗೆ ಟಿಕೆಟ್ ಕೊಡಬೇಕು : ಪ್ರಮೋದ್ ಮುತಾಲಿಕ್

ಬೆಳಗಾವಿ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿರುವ ಮುತಾಲಿಕ್, ನಾನು ಸತತ 45 ವರ್ಷ ಮನೆ ಬಿಟ್ಟು ಹಿಂದುತ್ವ, ಜಾಗೃತಿ, ಸಮಾಜಕ್ಕೆಂದೆ ಹಲವು ತ್ಯಾಗ ಮಾಡಿದ್ದೇನೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ನನಗೆ ಟಿಕೆಟ್ ನೀಡಬೇಕು ಎಂದು ಹೇಳುವ ಮೂಲಕ ಟಿಕೆಟ್ ಆಕಾಂಕ್ಷಿ ಎಂಬುದನ್ನು ತೋರಿಸಿದ್ದಾರೆ.

ಬೆಳಗಾವಿ ಸಂಸದರಾಗಿದ್ದ ಸುರೇಶ್ ಅಂಗಡಿ ಅವರಿಗೆ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರು. ಈಗ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ. ಹೀಗಾಗಿ ಪ್ರಮೋದ್ ಮುತಾಲಿಕ್ ಬೇಡಿಕೆ ಇಡುತ್ತಿದ್ದಾರೆ.

ಮನೆ ಬಿಟ್ಟು ನಾನು ಹಲವಾರು ಸಮಾಜ ಜಾಗೃತಿ ಕಾರ್ಯಕ್ರಮಗಳು, ಸಂಘಟನೆಗಳಲ್ಲಿ ಭಾಗಿಯಾಗಿದ್ದೇನೆ. ಇದನ್ನು ಪರಿಗಣಿಸಿ ಬಿಜೆಪಿ ಪಕ್ಷ ಟಿಕೆಟ್ ನೀಡಬೇಕು. ಈ ಕುರಿತು ಹಿರಿಯ ನಾಯಕರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ ಎಂದರು.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Suddione
Top