Sunday, 24 Jan, 3.30 pm ಸುದ್ದಿಒನ್

ಪ್ರಮುಖ ಸುದ್ದಿ
ಅಪಘಾತದಲ್ಲಿ ಆರ್‍ಎಸ್‍ಎಸ್ ಪ್ರಮುಖ್ ಮೃತ

ಬೀದರ್ :ಬೈಕ್ ಹಾಗೂ ಬಸ್ ನಡುವೆ ಡಿಕ್ಕಿಯಾಗಿ ಆರ್‍ಎಸ್‍ಎಸ್‍ನ ವಿಭಾಗೀಯ ಪ್ರಮುಖ ಸುಧಾಕರ ದೇಶಪಾಂಡೆ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನಲ್ಲಿ ನಡೆದಿದೆ.

ಭಾತಂಬ್ರಾ ರಸ್ತೆಯಲ್ಲಿ ಮಹಾರಾಷ್ಟ್ರ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಸುಧಾಕರ ದೇಶಪಾಂಡೆ ಮೃತಪಟ್ಟಿದ್ದು, ಮತ್ತೊಬ್ಬ ವ್ಯಕ್ತಿಗೆ ಗಾಯವಾಗಿದೆ.

ದಶಕಗಳ ಕಾಲ ಹಿಂದೂ ಜಾಗರಣ ವೇದಿಕೆ, ವಿಶ್ವ ಹಿಂದು ಪರಿಷತ್ ಹಾಗೂ ರಾಷ್ಟ್ರೀಯ ಸ್ವಯಂ ಸೇವಾ ಸಂಘದಲ್ಲಿ ಸಕ್ರಿಯರಾಗಿದ್ದರು. ಭಾಲ್ಕಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Suddione
Top