ಪ್ರಮುಖ ಸುದ್ದಿ
ಭೋವಿ ಗುರುಪೀಠಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ
ಸುದ್ದಿಒನ್, ಚಿತ್ರದುರ್ಗ : ನಗರದ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠಕ್ಕೆ ಶನಿವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಭೇಟಿ ನೀಡಿದರು.
ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದರ್ಶನಾಶೀರ್ವಾದ ಪಡೆದರು. ಬಳಿಕ ಮಾತನಾಡಿದ ಎನ್.ಮಂಜುನಾಥ ಪ್ರಸಾದ್, ದಲಿತ ಕೇರಿ, ಹಟ್ಟಿ ತಾಂಡಾ ಹಾಗೂ ಮಠಗಳ ಅಭಿವೃದ್ಧಿ ಆಗುವುದು ಅವಶ್ಯಕತೆಯಿದೆ. ಇದಕ್ಕೆ ಸರ್ಕಾರದ ಅನೇಕ ಯೋಜನೆಗಳು ಪರಿಣಾಮಕಾರಿಯಾಗಿ ಜಾರಿಗೊಳಿಸಲು ನಿರ್ದೇಶನ ನೀಡಿದೆ ಎಂದರು.
ಇದೇ ವೇಳೆ ಗ್ರಾಮ ಪಂಚಾಯಿತಿ ಅಕೌಂಟೆಂಟ್ ಒಕ್ಕೂಟದ ಸದಸ್ಯರು ಭೇಟಿ ಪದೋನ್ನತ್ತಿ ಕುರಿತು ಮನವಿ ನೀಡಿದರು. ಈ ಸಂದರ್ಭದಲ್ಲಿ ಶ್ರೀಗಳು ಅಧಿಕಾರಿಗಳಿಗೆ ಗೌರವ ಸಮರ್ಪಣೆ ಮಾಡಿದರು.
Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Suddione