Dailyhunt Logo
  • Light mode
    Follow system
    Dark mode
    • Play Story
    • App Story
ಚಳ್ಳಕೆರೆ: ಚಿರತೆ ದಾಳಿ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ : ದೊಡ್ಡಚೆಲ್ಲೂರಿನಲ್ಲಿ ಬೋನು ಅಳವಡಿಕೆ

ಚಳ್ಳಕೆರೆ: ಚಿರತೆ ದಾಳಿ ಬೆನ್ನಲ್ಲೇ ಎಚ್ಚೆತ್ತ ಅರಣ್ಯ ಇಲಾಖೆ : ದೊಡ್ಡಚೆಲ್ಲೂರಿನಲ್ಲಿ ಬೋನು ಅಳವಡಿಕೆ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್,ಚಳ್ಳಕೆರೆ ,ಮೇ.24: ತಾಲೂಕಿನ ದೊಡ್ಡಚೆಲ್ಲೂರು ಗ್ರಾಮದಲ್ಲಿ ಕುರಿಗಾಯಿಗಳ ಮೇಲೆ ಚಿರತೆ ದಾಳಿ ಮಾಡಿದ ಘಟನೆ ಬೆನ್ನಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.

ಇದೀಗ ಚಿರತೆ ಸೆರೆ ಹಿಡಿಯುವ ಉದ್ದೇಶದಿಂದ ದೊಡ್ಡಚೆಲ್ಲೂರು ಗ್ರಾಮದ ಸಮೀಪ ಚಿರತೆ ಸೆರೆಗೆ ಬೋನು ಅಳವಡಿಸಲಾಗಿದೆ.

ಇದೇ ವೇಳೆ, ಗ್ರಾಮಸ್ಥರು ಹಾಗೂ ಪಶುಪಾಲಕರಿಗೆ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ಅರಿವು ಮೂಡಿಸಿದರು.
ದೊಡ್ಡಚಲ್ಲೂರು ಗ್ರಾಮದ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ರಾತ್ರಿ ವೇಳೆ ಎಚ್ಚರಿಕೆಯಿಂದ ಸಂಚರಿಸುವಂತೆ ಮತ್ತು ಕುರಿ ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರಿಸುವಂತೆ ಅರಣ್ಯ ಅಧಿಕಾರಿ ಅಶೋಕ ಸಲಹೆ ನೀಡಿದ್ದಾರೆ. ಕಾಡು ಪ್ರಾಣಿಗಳ ದಾಳಿ ಸಂಭವಿಸಿದ ಸಂದರ್ಭಗಳಲ್ಲಿ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಎನ್. ರಾಜೇಶ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮಸ್ಥರು, ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Suddione