Dailyhunt Logo
  • Light mode
    Follow system
    Dark mode
    • Play Story
    • App Story
ಚಿತ್ರದುರ್ಗ | ಜಿ.ಆರ್.ಹಳ್ಳಿ ಬಳಿ ಅಪಘಾತ ; ಓರ್ವ ಸಾವು

ಚಿತ್ರದುರ್ಗ | ಜಿ.ಆರ್.ಹಳ್ಳಿ ಬಳಿ ಅಪಘಾತ ; ಓರ್ವ ಸಾವು

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 14 : ರಾಷ್ಟ್ರೀಯ ಹೆದ್ದಾರಿ 13 ರ ಗುಡ್ಡದರಂಗವ್ವನಹಳ್ಳಿ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಇಂದು (ಅ.14, ಬುಧವಾರ) ಬೆಳಿಗ್ಗೆ ನಡೆದಿದೆ.

ತಾಲ್ಲೂಕಿನ ಕೂನಬೇವು ಗ್ರಾಮದ ಸ್ವಾಮಿ (30 ವರ್ಷ) ಮೃತ ವ್ಯಕ್ತಿ.

ದ್ವಿಚಕ್ರ ವಾಹನಕ್ಕೆ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Suddione