ಚಿತ್ರದುರ್ಗ, (ಮೇ.22) : ಜಿಲ್ಲೆಯಲ್ಲಿ ಮೇ 22ರಂದು ಬಿದ್ದ ಮಳೆಯ ವಿವರದನ್ವಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ 99.4 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.
ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 45.4 ಮಿ.ಮೀ, ತಳುಕು 13, ಪರಶುರಾಂಪುರ 6.2, ಡಿ.ಮರಿಕುಂಟೆಯಲ್ಲಿ 37.6 ಮಿ.ಮೀ ಮಳೆಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 6.2 ಮಿ.ಮೀ ಮಳೆಯಾಗಿದೆ.
ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 2.2 ಮಿ.ಮೀ, ಈಶ್ವರಗೆರೆಯಲ್ಲಿ 13.2 ಮಿ.ಮೀ ಮಳೆಯಾಗಿದೆ.
ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮುರಿನಲ್ಲಿ 37.2 ಮಿ.ಮೀ, ರಾಯಾಪುರದಲ್ಲಿ 22.8, ಬಿ.ಜಿ.ಕೆರೆಯಲ್ಲಿ 40 ಮಿ.ಮೀ ಮಳೆಯಾಗಿದೆ.
ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರದಲ್ಲಿ 5.2 ಮಿ.ಮೀ ಮಳೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-2ರಲ್ಲಿ 2.2, ಐನಹಳ್ಳಿ 2, ತುರುವನೂರಿನಲ್ಲಿ 11.8 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

