Dailyhunt Logo
  • Light mode
    Follow system
    Dark mode
    • Play Story
    • App Story
ಚಿತ್ರದುರ್ಗ ನಗರಸಭೆ: ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ ನಗರಸಭೆ: ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ. ಜುಲೈ04: ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಬಡ ಜನರು ಹಾಗೂ ವಿಕಲಚೇತನರ ಕಲ್ಯಾಣಕ್ಕಾಗಿ 2026-27ನೇ ಸಾಲಿನ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನ.

ನಗರಸಭೆಯ ನಗರಸಭೆ ನಿಧಿ ಮತ್ತು ಎಸ್.ಎಫ್.ಸಿ. ನಿಧಿ ಅಡಿಯಲ್ಲಿ ಶೇ.24.10% ಮತ್ತು ಶೇ. 7.25 ಕ್ರಿಯಾ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಬಡ ಜನರ ಕಲ್ಯಾಣದ ವೈಯಕ್ತಿಕ ಕಾರ್ಯಕ್ರಮಗಳಿಗೆ ನೆರವು ನೀಡಲಾಗುವುದು. ಇದರೊಂದಿಗೆ ಎಸ್.ಎಸ್.ಎಲ್.ಸಿ ಇಂದ ಸ್ನಾತಕೋತ್ತರ ಪದವಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆರ್ಥಿಕ ಪ್ರೋತ್ಸಾಹಧನ ನೀಡಲು ಹಾಗೂ ಶೇ.5ರ ಯೋಜನೆಯಡಿ ಅರ್ಹ ವಿಕಲಚೇತನರಿಗೆ ಮೋಟಾರ್ ಚಾಲಿತ ತ್ರಿಚಕ್ರ ವಾಹನವನ್ನು ಖರೀದಿಸಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಈ ಎಲ್ಲಾ ಯೋಜನೆಗಳ 2026-27ನೇ ಸಾಲಿನ ಕ್ರಿಯಾ ಯೋಜನೆಗೆ ಜಿಲ್ಲಾಧಿಕಾರಿಗಳು ಅನುಮೋದನೆ ನೀಡಿದ್ದಾರೆ.

ಅರ್ಹ ಫಲಾನುಭವಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ 31.07.2026 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗಿ ಕೋರಲಾಗಿದೆ.
ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ನಗರಸಭೆಯ ವೆಬ್‍ಸೈಟ್ www.chitradurgacity.mrc.gov.in ಗೆ ಭೇಟಿ ನೀಡಬಹುದು ಅಥವಾ ಕಚೇರಿಯ ವೇಳೆಯಲ್ಲಿ ಕಚೇರಿಯ ಸೂಚನಾ ಫಲಕ ಹಾಗೂ ವಿಷಯ ನಿರ್ವಾಹಕರನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Suddione