Dailyhunt Logo
  • Light mode
    Follow system
    Dark mode
    • Play Story
    • App Story
ಚಿತ್ರದುರ್ಗ : ತಮಟಕಲ್ಲು ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಕರಡಿ ಸಾವು

ಚಿತ್ರದುರ್ಗ : ತಮಟಕಲ್ಲು ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಕರಡಿ ಸಾವು

ಸುದ್ದಿಒನ್, ಚಿತ್ರದುರ್ಗ, ಜುಲೈ. 31 : ನಗರದ ಹೊರವಲಯದ ತಮಟಕಲ್ಲು ರಸ್ತೆಯಲ್ಲಿ ಮಂಗಳವಾರ ಮುಂಜಾನೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕರಡಿಯೊಂದು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದೆ.

ತಮಟಕಲ್ಲು ರಸ್ತೆಯಲ್ಲಿ ನಸುಕಿನ ವೇಳೆಯಲ್ಲಿ ರಸ್ತೆ ದಾಟುವಾಗ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಜಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಮಾರ್ಗದಲ್ಲಿ ವಾಹನಗಳ ಡಿಕ್ಕಿಯಿಂದ ಕರಡಿಗಳು ಸಾವನ್ನಪ್ಪುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಇದೇ ಜಾಗದಲ್ಲಿ ಕರಡಿಯೊಂದು ವಾಹನಕ್ಕೆ ಸಿಲುಕಿ ಮೃತಪಟ್ಟಿತ್ತು. ರಸ್ತೆ ಬದಿಯಲ್ಲಿ ವನ್ಯಜೀವಿಗಳ ಓಡಾಟ ಹೆಚ್ಚಿರುವುದರಿಂದ ಅವುಗಳ ಪ್ರಾಣ ರಕ್ಷಣೆಗೆ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ವೇಗವಾಗಿ ಸಂಚರಿಸುವ ವಾಹನಗಳಿಗೆ ಕಟ್ಟುನಿಟ್ಟಿನ ಕಡಿವಾಣ ಹಾಕಬೇಕು ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Suddione